ಬೆಂಗಳೂರು: ಚಾಕು ಇರಿತದಿಂದಾಗಿ ಗಾಯಗೊಂಡಿದ್ದ ಮಾಜಿ ಕಾರ್ಪೊರೇಟರ್ ಪತಿ ಆಯೂಬ್ ಖಾನ್ ಮೃತಪಟ್ಟಿದ್ದಾರೆ.
ಚಿಕಿತ್ಸೆ ಫಲಕಾರಿಯಾಗದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಯೂಬ್ ಖಾನ್ ಸಾವನ್ನಪ್ಪಿದ್ದಾರೆ. ಟಿಪ್ಪುನಗರ ವಾರ್ಡ್ ಮಾಜಿ ಕಾರ್ಪೊರೇಟರ್ ನಾಜಿಮಾ ಅವರ ಪತಿ ಅಯೂಬ್ ಖಾನ್ ಗೆ ನಿನ್ನೆ ಸಂಬಂಧಿಕರು ಚಾಕುವಿನಿಂದ ಇರಿದಿದ್ದರು. ಹೊಟ್ಟೆ ಭಾಗದಲ್ಲಿ ತೀವ್ರ ರಕ್ತಸ್ರಾವವಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ನಿನ್ನೆ ಚಾಮರಾಜಪೇಟೆಯಲ್ಲಿ ಆಸ್ತಿ ವಿಚಾರವಾಗಿ ಆಯುಬ್ ಖಾನ್ ಅಣ್ಣನ ಮಕ್ಕಳು ಚಾಕುವಿನಿಂದ ಇರಿದಿದ್ದರು ಎನ್ನಲಾಗಿದ್ದು, ಆರೋಪಿಗಳಿಗಾಗಿ ಚಾಮರಾಜಪೇಟೆ ಪೊಲೀಸರು ಹುಡುಕಾಟ ನಡೆಸಿದ್ದಾರೆ.