ಹುಬ್ಬಳ್ಳಿ: ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಕುಲಪತಿಗೆ ಮಸಿ ಎರಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 8 ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.
ಮೂರು ಮತ್ತು ಐದನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಮುಂದಿನ ಸೆಮಿಸ್ಟರ್ ಗೆ ಬಡ್ತಿ ನೀಡಬೇಕೆಂದು ಒತ್ತಾಯಿಸಿ ಎನ್.ಎಸ್.ಯು.ಐ. ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ಕೈಗೊಂಡಿದ್ದು, ಈ ಸಂದರ್ಭದಲ್ಲಿ ಕುಲಪತಿ ಮೇಲೆ ವಿದ್ಯಾರ್ಥಿಯೊಬ್ಬ ಮಸಿ ಎರಚಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಪಿಎಂಸಿ ನವನಗರ ಠಾಣೆ ಪೊಲೀಸರು 8 ವಿದ್ಯಾರ್ಥಿಗಳನ್ನು ಬಂಧಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ ಎಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.