alex Certify BIG NEWS: ಎಲ್ಲ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎಲ್ಲ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಆದೇಶ

ನವದೆಹಲಿ: ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮಾರ್ಗಸೂಚಿ ನೀಡಲಾಗಿದೆ ಎಂದು ಗೃಹ ಸಚಿವಾಲಯ ಮಂಗಳವಾರ ಲೋಕಸಭೆಗೆ ಮಾಹಿತಿ ನೀಡಿದೆ.

ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ್ ರಾಯ್ ಅವರು ಲೋಕಸಭೆಗೆ ಲಿಖಿತ ಉತ್ತರ ನೀಡಿದ್ದು, ಕಳೆದ ವರ್ಷ ಡಿಸೆಂಬರ್ 2 ರ ಸುಪ್ರೀಂ ಕೋರ್ಟ್ ಆದೇಶದಲ್ಲಿ ಸಿಸಿಟಿವಿ ಅಳವಡಿಸಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮತ್ತು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಎಲ್ಲ ಪೊಲೀಸ್ ಠಾಣೆಗಳಲ್ಲಿ ಮತ್ತು ಕೇಂದ್ರ ತನಿಖಾ ಸಂಸ್ಥೆಗಳ ಕಚೇರಿಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು.

ಈ ವರ್ಷದ ಏಪ್ರಿಲ್ 6 ರಂದು ನಡೆದ ಕೊನೆಯ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ಆದೇಶದ ದಿನಾಂಕದಿಂದ ಒಂದು ತಿಂಗಳೊಳಗೆ ಕೇಂದ್ರ ಸಂಸ್ಥೆಗಳಿಗೆ ಬಜೆಟ್ ಹಂಚಿಕೆ ಮಾಡಲು ಮತ್ತು ಆರು ತಿಂಗಳ ಅವಧಿಯಲ್ಲಿ ಸಂಪೂರ್ಣ ಆದೇಶವನ್ನು ಜಾರಿಗೆ ತರಲು ನಿರ್ದೇಶಿಸಿದೆ ಎಂದು ಸಚಿವರು ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ನೀಡಿದ ಸಮಯದೊಳಗೆ ತಮ್ಮ ಕಚೇರಿಗಳಲ್ಲಿ ಕೇಂದ್ರ ತನಿಖಾ ಸಂಸ್ಥೆಗಳು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಪೊಲೀಸರು ರಾಜ್ಯ ವಿಷಯವಾಗಿರುವುದರಿಂದ, ಸಿಸಿಟಿವಿಗಳನ್ನು ಹೊಂದಿರುವ ಪೊಲೀಸ್ ಠಾಣೆಗಳ ಸಂಖ್ಯೆಯ ಮಾಹಿತಿಯನ್ನು ಕೇಂದ್ರ ಸರ್ಕಾರದ ಮಟ್ಟದಲ್ಲಿ ನಿರ್ವಹಿಸಲಾಗುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದು, ಈ ವರ್ಷ ಜುಲೈ 8 ರಂದು ರಾಜ್ಯ ಮತ್ತು ಕೇಂದ್ರಾಡಳಿತ ಸರ್ಕಾರಗಳಿಗೆ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಸಿಸಿಟಿವಿ ಅಳವಡಿಸಲು ಸೂಚನೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...