ಬೆಂಗಳೂರು : ರಾಜ್ಯದಲ್ಲಿ ಮಹಿಳೆಯರು ಮತ್ತು ಅಪ್ರಾಪ್ತ ಬಾಲಕಿಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ರಾಜ್ಯಾದ್ಯಂತ ವಿವಿಧ ಸ್ಥಳಗಳಲ್ಲಿ 5 ಲಕ್ಷ ಕ್ಯಾಮರಾಗಳನ್ನು ಅಳವಡಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ಚರ್ ವಿಧಾನ ಮಂಡಲ ಅಧಿವೇಶನದಲ್ಲಿ ತಿಳಿಸಿದರು.
ನ್ಯಾಯಾಲಯಗಳಲ್ಲಿ ಈಗಾಗಲೇ ದಾಖಲಾಗಿರುವ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಮತ್ತು ಫೋಕ್ಸೋ ಪ್ರಕರಣಗಳು ಆದಷ್ಟು ಬೇಗ ಇತ್ಯರ್ಥವಾಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಬೆಳಗಾವಿ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ತಿಳಿಸಿದರು.
ರಾಜ್ಯದಲ್ಲಿ ಮಹಿಳೆಯರು ಮತ್ತು ಅಪ್ರಾಪ್ತ ಬಾಲಕಿಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ರಾಜ್ಯಾದ್ಯಂತ ವಿವಿಧ ಸ್ಥಳಗಳಲ್ಲಿ 5 ಲಕ್ಷ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ನ್ಯಾಯಾಲಯಗಳಲ್ಲಿ ಈಗಾಗಲೇ ದಾಖಲಾಗಿರುವ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಮತ್ತು ಫೋಕ್ಸೋ ಪ್ರಕರಣಗಳು ಆದಷ್ಟು ಬೇಗ… pic.twitter.com/CQTcGOS4jc
— DIPR Karnataka (@KarnatakaVarthe) December 13, 2024