ಬೆಂಗಳೂರು : ಸರ್ಕಾರಿ ಆಸ್ಪತ್ರೆಗಳಲ್ಲಿ ಬಡವರ ಬಗ್ಗೆ ಕಾಳಜಿ ವಹಿಸಿ ಆರೋಗ್ಯ ಸೇವೆ ವಿಸ್ತರಿಸುವ ಉದ್ದೇಶದಿಂದ ರಾಜ್ಯಾದ್ಯಂತ 219 ಡಯಾಲಿಸಿಸ್ ಕೇಂದ್ರಗಳಲ್ಲಿ 800 ಹೊಸ ಏಕಬಳಕೆಯ ಡಯಾಲಿಸಿಸ್ ಯಂತ್ರಗಳ ಅಳವಡಿಕೆ ಮಾಡಲಾಗುತ್ತಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.
ರಾಜ್ಯಾದ್ಯಂತ 219 ಡಯಾಲಿಸಿಸ್ ಕೇಂದ್ರಗಳಲ್ಲಿ 800 ಹೊಸ ಏಕಬಳಕೆಯ ಡಯಾಲಿಸಿಸ್ ಯಂತ್ರಗಳ ಅಳವಡಿಕೆ ಮಾಡಲಾಗುತ್ತಿದೆ ಈ ಮೂಲಕ ಸರ್ಕಾರವೇ ಡಯಾಲಿಸಿಸ್ ವೆಚ್ಚ ಭರಿಸಿ ರೋಗಿಗಳಿಗೆ ಉಚಿತವಾಗಿ ಆರೋಗ್ಯ ಸೇವೆ ಒದಗಿಸಲಿದೆ. ಸೋಂಕು ರಹಿತ ಡಯಾಲಿಸಿಸ್ ವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.ಮೂತ್ರಪಿಂಡ ವೈಫಲ್ಯಕ್ಕೆ ಒಳಗಾದವರು ವಾರದಲ್ಲಿ ಮೂರು ಬಾರಿ ಡಯಾಲಿಸಿಸ್ ಮಾಡಿಸಿಕೊಳ್ಳಬೇಕಾಗುತ್ತದೆ. ಒಮ್ಮೆ ಡಯಾಲಿಸಿಸ್ ಮಾಡಿಸಿಕೊಂಡರೆ ₹ 2 ಸಾವಿರದವರೆಗೂ ವೆಚ್ಚವಾಗುತ್ತದೆ. ಇದರಿಂದಾಗಿ ಬಡವರಿಗೆ ಇಷ್ಟು ಹಣ ಪಾವತಿಸುವುದು ಕಷ್ಟ. ಆದ್ದರಿಂದ ಸರ್ಕಾರ ಉಚಿತವಾಗಿ ಡಯಾಲಿಸಿಸ್ ಸೇವೆ ಒದಗಿಸುತ್ತಿದೆ.
ಕರ್ನಾಟಕದಲ್ಲಿ 219 ಡಯಾಲಿಸಿಸ್ ಕೇಂದ್ರಗಳಿದ್ದು, 800 ಡಯಾಲೈಸರ್ ಯಂತ್ರಗಳನ್ನು ಕೇಂದ್ರಗಳಿಗೆ ಅಳವಡಿಕೆ ಮಾಡಲಾಗುತ್ತಿದೆ. ಅಲ್ಲದೇ, ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ತಾಯಿ ಮತ್ತು ಮಕ್ಕಳ ಘಟಕ ನಿರ್ಮಾಣ ಸೇರಿ ಆಸ್ಪತ್ರೆಯನ್ನು ₹ 150 ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೆ ಏರಿಸಲು ಕ್ರಮವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.