ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ದಿನಾಂಕ:01-04-2019ಕ್ಕಿಂತ ಮೊದಲು ನೋಂದಾಯಿಸಲಾದ ಹಳೆಯ ವಾಹನಗಳಿಗೆ ದಿನಾಂಕ:17-11-2023 ರೊಳಗಾಗಿ ಹೆಚ್.ಎಸ್.ಆರ್.ಪಿ ಅಳವಡಿಕ ಯನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರವು ಅದೇಶ ಹೊರಡಿಸಿದೆ.
ಇದೀಗ ಸರ್ಕಾರದ ಅಧಿಸೂಚನೆ ಸಂಖ್ಯೆ TD 193 TDO 2021 ದಿನಾಂಕ:16-11-2023ರಲ್ಲಿ ದಿನಾಂಕ:17-11-2023ರವರೆಗೆ ನೀಡಲಾಗಿದ್ದ ಕಾಲಾವಕಾಶ ವನ್ನು ದಿನಾಂಕ:17-02-2024ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿರುತ್ತದೆ. ಆದ್ದರಿಂದ, ದಿನಾಂಕ:01-04-2019ಕ್ಕಿಂತ ಮೊದಲು ನೋಂದಾಯಿಸಲಾದ ಹಳೆಯ ವಾಹನಗಳ ಮಾಲೀಕರು ದಿನಾಂಕ:17-02-2024 ರೊಳಗಾಗಿ ತಮ್ಮ ವಾಹನಗಳಿಗೆ ಹೆಚ್.ಎಸ್.ಆರ್.ಪಿ. ಅಳವಡಿಕೆ ಮಾಡಿಕೊಳ್ಳುವಂತೆ ಈ ಮೂಲಕ ಸಾರ್ವಜನಿಕರ ಮಾಹಿತಿಗಾಗಿ ತಿಳಿಸಲಾಗಿದೆ.
ನಿಗದಿತ ದಿನಾಂಕದೊಳಗೆ ಹೆಚ್.ಎಸ್.ಆರ್.ಪಿ. ಯನ್ನು ಅಳವಡಿಸದಿದ್ದಲ್ಲಿ ಸರ್ಕಾರಿ ಅಧಿಸೂಚನೆ ಸಂಖ್ಯೆ: ಟಿಡಿ 250 ಟಿಡಿಒ 2019, ಬೆಂಗಳೂರು, ದಿನಾಂಕ: 21-09-2019 ರ ಪುಕಾರ ಹಾಗೂ ಕಾಲ ಕಾಲಕ್ಕೆ ಹೊರಡಿಸಲಾಗುವ ಸರ್ಕಾರದ ಆದೇಶಗಳನ್ವಯ ದಂಡವನ್ನು ವಿಧಿಸಲಾಗುತ್ತದೆ.