alex Certify `HSRP’ ನಂಬರ್ ಪ್ಲೇಟ್ ಅಳವಡಿಕೆ : ಸಾರಿಗೆ ಇಲಾಖೆಯಿಂದ ಮಹತ್ವದ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

`HSRP’ ನಂಬರ್ ಪ್ಲೇಟ್ ಅಳವಡಿಕೆ : ಸಾರಿಗೆ ಇಲಾಖೆಯಿಂದ ಮಹತ್ವದ ಆದೇಶ

ಬೆಂಗಳೂರು  :  ಕರ್ನಾಟಕ ರಾಜ್ಯದಲ್ಲಿ ದಿನಾಂಕ:01-04-2019ಕ್ಕಿಂತ ಮೊದಲು ನೋಂದಾಯಿಸಲಾದ ಹಳೆಯ ವಾಹನಗಳಿಗೆ ದಿನಾಂಕ:17-11-2023 ರೊಳಗಾಗಿ ಹೆಚ್.ಎಸ್.ಆರ್.ಪಿ ಅಳವಡಿಕ ಯನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರವು ಅದೇಶ ಹೊರಡಿಸಿದೆ.  

ಇದೀಗ ಸರ್ಕಾರದ ಅಧಿಸೂಚನೆ ಸಂಖ್ಯೆ TD 193 TDO 2021 ದಿನಾಂಕ:16-11-2023ರಲ್ಲಿ ದಿನಾಂಕ:17-11-2023ರವರೆಗೆ ನೀಡಲಾಗಿದ್ದ ಕಾಲಾವಕಾಶ ವನ್ನು ದಿನಾಂಕ:17-02-2024ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿರುತ್ತದೆ. ಆದ್ದರಿಂದ, ದಿನಾಂಕ:01-04-2019ಕ್ಕಿಂತ ಮೊದಲು ನೋಂದಾಯಿಸಲಾದ ಹಳೆಯ ವಾಹನಗಳ ಮಾಲೀಕರು ದಿನಾಂಕ:17-02-2024 ರೊಳಗಾಗಿ  ತಮ್ಮ ವಾಹನಗಳಿಗೆ ಹೆಚ್.ಎಸ್.ಆರ್.ಪಿ. ಅಳವಡಿಕೆ ಮಾಡಿಕೊಳ್ಳುವಂತೆ ಈ ಮೂಲಕ ಸಾರ್ವಜನಿಕರ ಮಾಹಿತಿಗಾಗಿ ತಿಳಿಸಲಾಗಿದೆ.

 ನಿಗದಿತ ದಿನಾಂಕದೊಳಗೆ ಹೆಚ್.ಎಸ್.ಆರ್.ಪಿ. ಯನ್ನು ಅಳವಡಿಸದಿದ್ದಲ್ಲಿ ಸರ್ಕಾರಿ ಅಧಿಸೂಚನೆ ಸಂಖ್ಯೆ: ಟಿಡಿ 250  ಟಿಡಿಒ 2019, ಬೆಂಗಳೂರು, ದಿನಾಂಕ: 21-09-2019 ರ ಪುಕಾರ ಹಾಗೂ ಕಾಲ ಕಾಲಕ್ಕೆ ಹೊರಡಿಸಲಾಗುವ ಸರ್ಕಾರದ ಆದೇಶಗಳನ್ವಯ ದಂಡವನ್ನು ವಿಧಿಸಲಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...