ಬೆಂಗಳೂರು : ಸಾರ್ವಜನಿಕ ಸೇವಾ ವಾಹನಗಳಲ್ಲಿ ವಿಎಲ್ಟಿ ಡಿವೈಸ್ , ತುರ್ತು ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರವು ಸಾರ್ವಜನಿಕ ಸೇವಾ ವಾಹನಗಳಲ್ಲಿ ವಿಎಲ್ಟಿ ಉಪಕರಣ ಮತ್ತು ತುರ್ತು ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದೆ. ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಸಾರ್ವಜನಿಕ ಸೇವಾ ವಾಹನಗಳಲ್ಲಿ ವೆಹಿಕಲ್ ಲೊಕೇಶನ್ ಟ್ರ್ಯಾಕಿಂಗ್ (ವಿಎಲ್ಟಿ) ಉಪಕರಣ ಮತ್ತು ತುರ್ತು ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಲಾಗಿದೆ. ಹಳದಿ ನಂಬರ್ ಪ್ಲೇಟ್ನ ಟ್ಯಾಕ್ಸಿ, ಕ್ಯಾಬ್, ಖಾಸಗಿ ಬಸ್, ರಾಷ್ಟ್ರೀಯ ಪರವಾನಗಿ ಪಡೆದ ಸರಕು ಸಾಗಾಟ ವಾಹನಗಳಿಗೆ ಈ ಆದೇಶ ಅನ್ವಯವಾಗಲಿದೆ. 2024ರ ನವೆಂಬರ್ 10ರ ಒಳಗಾಗಿ ವಿಎಲ್ಟಿ ಅಳವಡಿಸತಕ್ಕದ್ದು ಎಂದು ಸರ್ಕಾರ ಸೂಚನೆ ನೀಡಿದೆ.