ಹೊಸಪೇಟೆ: ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿದ್ದು, ಹೊಸ ಗೇಟ್ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದೆ.
ಡ್ಯಾಂ ಗೇಟ್ ಅಳವಡಿಕೆ ಕಾರ್ಯ ವೀಕ್ಷಿಸಲು ಸ್ಥಳಕ್ಕೆ ತೆರಳಿದ್ದ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಕಾರ್ಯನಿರತರಾಗಿದ್ದ ತಜ್ಞರು ಮತ್ತು ಕಾರ್ಮಿಕರೊಂದಿಗೆ ಚರ್ಚೆ ನಡೆಸಿದ್ದಾರೆ. ಡ್ಯಾಂ ತಜ್ಞ ಕನ್ನಯ್ಯನಾಯ್ಡು ಅವರ ತಂಡಕ್ಕೆ ಸಚಿವ ಜಮೀರ್ ಅಹ್ಮದ್ ಧೈರ್ಯ ತುಂಬಿದ್ದಾರೆ.
ಶುಕ್ರವಾರ ಗೇಟ್ ಅಳವಡಿಸಿ ಯಶಸ್ವಿಗೊಳಿಸಿ. ಪ್ರತೀ ಕಾರ್ಮಿಕರಿಗೆ ವೈಯಕ್ತಿಕವಾಗಿ 50 ಸಾವಿರ ರೂ. ಕೊಡುತ್ತೇನೆ. ಧೈರ್ಯವಾಗಿ ಕೆಲಸ ಮಾಡಿ ಎಂದು ಆತ್ಮವಿಶ್ವಾಸ ತುಂಬಿದ್ದಾರೆ. 19ನೇ ಗೇಟ್ ನಲ್ಲಿ ಹರಿದು ಹೋಗುತ್ತಿರುವ ಅಪಾರ ಪ್ರಮಾಣದ ನೀರು ತಡೆಗೆ ಸ್ಟಾಪ್ ಲಾಗ್ ಗೇಟ್ ಕೂರಿಸಲು ಪ್ರಯತ್ನ ನಡೆದಿದೆ.