ವಿಜಯನಗರ(ಹೊಸಪೇಟೆ): ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ನೀರಿನಲ್ಲಿ ಕೊಚ್ಚಿ ಹೋದ ಹಲವು ದಿನಗಳ ಬಳಿಕ ಗೇಟ್ ಡಿಸೈನ್ ತಜ್ಞ ಕನ್ಹಯ್ಯ ನಾಯ್ಡು ನೇತೃತ್ವದಲ್ಲಿ ಆಪರೇಷನ್ ತುಂಗಭದ್ರಾ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ ಯಶಸ್ವಿಯಾಗಿದೆ.
ಟಿಬಿ ಡ್ಯಾಂನ ಒಂದನೇ ಸ್ಟಾಪ್ ಲಾಗ್ ಗೇಟ್ ಎಲಿಮೆಂಟ್ ಅಳವಡಿಕೆ ಕಾರ್ಯ ಯಶಸ್ವಿಯಾಗಿದೆ. ಕನ್ಹಯ್ಯ ನಾಯ್ಡು ನೇತೃತ್ವದಲ್ಲಿ ಸ್ಟಾಪ್ ಲಾಗ್ ಗೇಟ್ ಅಳವಡಿಸಲಾಗಿದೆ. ಒಂದನೇ ಗೇಟ್ ಅಳವಡಿಕೆ ಯಶಸ್ವಿಯಾಗಿದ್ದು, ನಾಳೆ ಮತ್ತೊಂದು ಸ್ಟಾಪ್ ಲಾಗ್ ಗೇಟ್ ಅಳವಡಿಸಲಾಗುವುದು.
ಎರಡು ದಿನಗಳ ಶ್ರಮದಿಂದ ಮೊದಲ ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಯಶಸ್ವಿಯಾಗಿದ್ದು ತುಂಗಭದ್ರಾ ಜಲಾಶಯದ ಮೇಲೆ ಸಂಭ್ರಮಾಚರಣೆ ನಡೆಸಲಾಗಿದೆ. ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಸಂಸದ ರಾಜಶೇಖರ ಹಿಟ್ನಾಳ್ ಮೊದಲಾದವರಿದ್ದರು. ಉಳಿದ ಎಲಿಮೆಂಟ್ ಗಳನ್ನು ನಾಳೆ ಅಳವಡಿಸಲಾಗುವುದು.