alex Certify ಜಾತಿ ಪ್ರಮಾಣಪತ್ರ ಗೊಂದಲ ನಿವಾರಣೆಗೆ ಸಿಎಂ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಾತಿ ಪ್ರಮಾಣಪತ್ರ ಗೊಂದಲ ನಿವಾರಣೆಗೆ ಸಿಎಂ ಸೂಚನೆ

ಬೆಂಗಳೂರು: ಜಾತಿ ಪ್ರಮಾಣ ಪತ್ರದ ಬಗ್ಗೆ ಇರುವ ಗೊಂದಲವನ್ನು ನಿವಾರಿಸಿ, ಸೂಕ್ತ ಸುತ್ತೋಲೆ ಹೊರಡಿಸುವಂತೆ ಸಮಾಜ ಕಲ್ಯಾಣ ಕಾರ್ಯದರ್ಶಿಗಳು ಹಾಗೂ ಕಾನೂನು ಇಲಾಖಾ ಕಾರ್ಯದರ್ಶಿಗಳಿಗೆ ಸೂಚನೆ ನೀಡಿರುವುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಪರಿಶಿಷ್ಟ ಪಂಗಡ ಸಮುದಾಯಗಳ ಜೊತೆಗಿನ ಸಭೆಯ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ, ಪರಿಶಿಷ್ಟ ಪಂಗಡದ ಸಮುದಾಯಗಳ ಸಭೆ ನಡೆಸಲಾಗಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಅವ್ಯವಹಾರದ ಹಿನ್ನಲೆಯಲ್ಲಿ ನಿಗಮಕ್ಕೆ ಅನುದಾನದ ಕೊರತೆಯಾಗದಂತೆ ನೋಡಿಕೊಳ್ಳುವುದು ಹಾಗೂ ಕೆಲವರು ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ಪಡೆಯುತ್ತಿರುವುದಕ್ಕೂ ಸಭೆ ಗಮನ ನೀಡಿದೆ ಎಂದರು.

ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಈ ವರ್ಷದಲ್ಲಿ ನಿಗದಿಪಡಿಸಲಾಗಿರುವ ಅನುದಾನವನ್ನು ಸಂಪೂರ್ಣವಾಗಿ ಒದಗಿಸಲಾಗುವುದು. ನಿಗಮದಲ್ಲಿ ಸುಮಾರು 89.63 ಕೋಟಿ ರೂ.ಗಳ ಮೊತ್ತ ಅವ್ಯವಹಾರವಾಗಿದ್ದು, ಇದರಲ್ಲಿ 5 ಕೋಟಿ ರೂ.ಗಳನ್ನು ವಾಪಸ್ಸು ಪಡೆಯಲಾಗಿದೆ. ಉಳಿದ 84.63 ಕೋಟಿ ರೂ.ಗಳಲ್ಲಿ 71.54 ಕೋಟಿ ರೂ.ಗಳನ್ನು ವಸೂಲು ಮಾಡಲಾಗಿದೆ. ಇನ್ನುಳಿದ ಸುಮಾರು 13 ಕೋಟಿಗಳ ಮೊತ್ತವನ್ನು ವಸೂಲು ಮಾಡಿಕೊಡುವುದಾಗಿ ಎಸ್ ಐ ಟಿ ತಿಳಿಸಿದೆ. ಈ ರೀತಿ ಒಟ್ಟು ಅವ್ಯವಹಾರವಾಗಿದ್ದ ಪೂರ್ಣ ಮೊತ್ತವನ್ನೂ ಸಹ ಮರುಪಡೆಯಲಾಗುತ್ತಿದೆ. ಈ ಮಧ್ಯೆ, ಪ್ರಕರಣ ನ್ಯಾಯಾಲಯದಲ್ಲಿದ್ದು ಮುಂಬರುವ ತೀರ್ಪಿನಂತೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...