ಬೆಂಗಳೂರು : ಜೂ.16 ರೊಳಗೆ ಬಿಬಿಎಂಪಿ ಶಾಲೆ, ಕಾಲೇಜುಗಳಿಗೆ ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರನ್ನು ನಿಯೋಜಿಸಲು ಬಿಬಿಎಂಪಿ ಸೂಚನೆ ನೀಡಿದೆ.
ಬಿಬಿಎಂಪಿ ಶಾಲೆ ಮತ್ತು ಕಾಲೇಜುಗಳಿಗೆ ಎಸ್ಡಿಎಂಸಿ ಮತ್ತು ಸಿಡಿಸಿ ಮೂಲಕ ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರನ್ನು ಜೂನ್ 16ರೊಳಗೆ ನಿಯೋಜಿಸಿಕೊಳ್ಳಲು ಸೂಚಿಸಲಾಗಿದೆ.
ಶಿಕ್ಷಣ ಇಲಾಖೆಯಿಂದ ಬೋಧಕ ಹುದ್ದೆಗಳಿಗೆ ಖಾಯಂ ಶಿಕ್ಷಕ, ಉಪನ್ಯಾಸಕರನ್ನು ನೇಮಿಸಿಕೊಳ್ಳಲು ನಿರ್ಧರಿಸಲಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಈ ನೇಮಕವಾಗುವವರೆಗೆ ಅಥವಾ 2024-25ನೇ ಶೈಕ್ಷಣಿಕ ಸಾಲಿಗೆ ಬಿಬಿಎಂಪಿ ಶಾಲೆ ಮತ್ತು ಕಾಲೇಜುಗಳಲ್ಲಿರುವ ಎಸ್ಡಿಎಂಸಿ ಹಾಗೂ ಕಾಲೇಜು ಅಭಿವೃದ್ಧಿ ಮಂಡಳಿಯಿಂದ ಅತಿಥಿ ಶಿಕ್ಷಕರು, ಉಪನ್ಯಾಸಕರನ್ನು ನಿಯೋಜಿಸಿಕೊಳ್ಳಬೇಕು ಎಂದು ಬಿಬಿಎಂಪಿ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.