
ದಾವಣಗೆರೆ: ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಗೆ ಹೊಸ ಸದಸ್ಯರ ನೋಂದಣಿ, ನೋಂದಣಿಯಾದ ಸದಸ್ಯರನ್ನು ನವೀಕರಿಸಲು ಸೂಚನೆ ನೀಡಲಾಗಿದೆ.
ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959 ಹಾಗೂ ಸಹಕಾರ ಸಂಘಗಳ ನಿಯಮ 1960ರಡಿ ಜಿಲ್ಲೆಯಲ್ಲಿ ನೊಂದಣಿಯಾಗಿರುವ ಎಲ್ಲಾ ವಿಧದ ಸಹಕಾರ ಸಂಘಗಳ ಸದಸ್ಯರು ಮಾರ್ಚ್ 31ರೊಳಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಹೊಸ ಸದಸ್ಯರನ್ನು ನೋಂದಾಯಿಸುವ ಮತ್ತು ನೋಂದಣಿಯಾದ ಸದಸ್ಯರನ್ನು ನವೀಕರಿಸಲು ತಿಳಿಸಲಾಗಿದೆ.
ಯಾವುದೇ ಒಂದು ಸಹಕಾರ ಸಂಘದ ಸದಸ್ಯರಾಗಿದ್ದರೆ ಈ ಯೋಜನೆಯ ಫಲಾನಭವಿಗಳಾಗಬಹುದು ಎಂದು ಸಹಕಾರ ಸಂಘಗಳ ಉಪನಿಬಂಧಕ ಮಧು ಶ್ರೀನಿವಾಸ್ ತಿಳಿಸಿದ್ದಾರೆ.