ಬೆಂಗಳೂರು: ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ ಚಾಲಕರನ್ನು ಮಾತೃ ಇಲಾಖೆಗೆ ಕಳುಹಿಸಲು ಸೂಚನೆ ನೀಡಲಾಗಿದೆ.
ನಿಯೋಜನೆ ಮೇರೆಗೆ ಬೇರೆ ಬೇರೆ ಇಲಾಖೆಗಳಲ್ಲಿ ಕೆಎಸ್ಆರ್ಟಿಸಿ, ಬಿಎಂಟಿಸಿ ಚಾಲಕರು ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಎಲ್ಲಾ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳಿಗೆ ಆರ್ಥಿಕ ಇಲಾಖೆಯಿಂದ ಸೂಚನೆ ನೀಡಲಾಗಿದ್ದು, ಕೆಎಸ್ಆರ್ಟಿಸಿ, ಬಿಎಂಟಿಸಿ ಚಾಲಕರನ್ನು ಮಾತೃ ಇಲಾಖೆಗೆ ಕಳುಹಿಸುವಂತೆ ತಿಳಿಸಲಾಗಿದೆ.