ಬೆಂಗಳೂರು: ರಾಜ್ಯ ಚುನಾವಣಾ ಆಯೋಗದ ಸೂಚನೆ ಮೇರೆಗೆ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆ ಪ್ರಕರಣ ದಾಖಲಿಸಲಾಗಿದೆ.
ಆಜಾನ್ ಸಮಯದಲ್ಲಿ ಮೊಬೈಲ್ ಅಂಗಡಿಯಲ್ಲಿ ಭಜನೆ ಹಾಕಿದಕ್ಕೆ ಯುವಕನ ಮೇಲೆ ಹಲ್ಲೆ ಮಾಡಿದ್ದ ಪ್ರಕರಣ ಖಂಡಿಸಿ ಬುಧವಾರ ಬೆಂಗಳೂರಿನ ನಗರ್ತಪೇಟೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸಂಸದ ತೇಜಸ್ವಿ ಸೂರ್ಯ ಅವರು ಮತೀಯ ಭಾವನೆ ಕೆರಳಿಸುವ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚಿಕ್ಕಪೇಟೆ ನಿವಾಸಿ ಸಾವಿತ್ರಿ ಹಳ್ಳಿ ಎಂಬುವರು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು.
ಆಯೋಗದ ಸೂಚನೆ ಮೇರೆಗೆ ಹಲಸೂರ್ ಗೇಟ್ ಠಾಣೆ ಪೊಲೀಸರು ತೇಜಸ್ವಿ ಸೂರ್ಯ ಅವರ ವಿರುದ್ದ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.