alex Certify ಅಸಂಘಟಿತ ಕಾರ್ಮಿಕರಿಗೆ ವಿಮಾ ಸೌಲಭ್ಯ : ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಸಂಘಟಿತ ಕಾರ್ಮಿಕರಿಗೆ ವಿಮಾ ಸೌಲಭ್ಯ : ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ ದೇಶದಲ್ಲಿಯೇ ಮೊದಲ ಬಾರಿಗೆ ಜಾರಿಯಾಗಿರುತ್ತದೆ. ಎಲ್ಲಾ ಅರ್ಹ ಗಿಗ್ ಕಾರ್ಮಿಕರು ಸೇವಾಸಿಂಧು ಪೋರ್ಟಲ್‍ನಲ್ಲಿ ನೋಂದಾಯಿಸಿಕೊಳ್ಳುವುದು. ವಿಮಾ ಸೌಲಭ್ಯವು ಕರ್ತವ್ಯದಲ್ಲಿರುವಾಗ/ ಇಲ್ಲದಿರುವಾಗ ಸಂಭವಿಸುವ ಅಪಘಾತಗಳಿಗೂ ಅನ್ವಯ. ಯೋಜನೆಯು ಸಂಪೂರ್ಣ ಉಚಿತ, ಯಾವುದೇ ರೀತಿಯ ಪ್ರೀಮಿಯಂ ಪಾವತಿಸುವ ಅಗತ್ಯತೆ ಇಲ್ಲ.

ಸ್ವಿಗ್ಗಿ, ಜೊಮಾಟೋಗಳಂತಹ ಸಂಸ್ಥೆಗಳಲ್ಲಿ ಫುಡ್ ಡೆಲಿವರಿ ಮಾಡುವ ಹಾಗೂ ಇ-ಕಾಮರ್ಸ್ ಸಂಸ್ಥೆಗಳಾದ ಅಮೆಜಾನ್, ಪ್ಲಿಪ್‍ಕಾರ್ಟ್, ಪೋರ್ಟರ್, ಫಾರ್ಮಸಿ, ಬ್ಲಿಂಕಿಟ್, ಜೆಪ್ಟೋ, ಬಿಗ್ ಬಾಸ್ಕೆಟ್, ಡಾಮಿನೋಸ್ ಮುಂತಾದ ಸಂಸ್ಥೆಗಳಲ್ಲಿ ಡೆಲಿವರಿ ವೃತ್ತಿಯಲ್ಲಿ ತೊಡಗಿಸಿಕೊಂಡ ಎಲ್ಲಾ ಅಸಂಘಟಿತ ಗಿಗ್ ಕಾರ್ಮಿಕರು ಈ ಯೋಜನೆಯಡಿ ನೋಂದಾಯಿಸಲು ಅರ್ಹತೆ ಹೊಂದಿರುತ್ತಾರೆ.

ಸೌಲಭ್ಯಗಳು: ಅಪಘಾತದಿಂದ ಮರಣ ಹೊಂದಿದಲ್ಲಿ ವಿಮಾ ಪರಿಹಾರ ರೂ. 2 ಲಕ್ಷ ಹಾಗೂ ಜೀವ ವಿಮಾ ರೂ. 2 ಲಕ್ಷ ಸೇರಿ ಒಟ್ಟು ರೂ. 4 ಲಕ್ಷಗಳು. ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಲ್ಲಿ ರೂ. 2 ಲಕ್ಷಗಳು. ಆಸ್ಪತ್ರೆ ವೆಚ್ಚ ಮರುಪಾವತಿ ರೂ. 1 ಲಕ್ಷಗಳವರೆಗೆ (ಅಪಘಾತ ಪ್ರಕರಣಗಳಿಗೆ ಮಾತ್ರ). ಜೀವ ವಿಮಾ ರೂ. 2 ಲಕ್ಷಗಳು.

ಈ ಯೋಜನೆಯಡಿ ನೋಂದಾಯಿಸಿಕೊಳ್ಳಲು 18 ರಿಂದ 60 ವಯೋಮಾನದವರಾಗಿದ್ದು, ಕರ್ನಾಟಕದಲ್ಲಿ ಗಿಗ್ ವೃತ್ತಿ ನಿರ್ವಹಿಸುತ್ತಿರುವವರು, ಆದಾಯ ತೆರಿಗೆ ಪಾವತಿದಾರರಾಗಿರಬಾರದು ಹಾಗೂ ಭವಿಷ್ಯನಿಧಿ ಮತ್ತು ಇ.ಎಸ್.ಐ ಫಲಾನುಭವಿಯಾಗಿರಬಾರದು. ಅರ್ಜಿ ಸಲ್ಲಿಸಲು ಆಧಾರ್ ಸಂಖ್ಯೆ, ವೃತ್ತಿ ನಿರ್ವಹಿಸುತ್ತಿರುವ ಸಂಸ್ಥೆಗಳು ವಿತರಿಸಿದ ಗುರುತಿನ ಚೀಟಿ/ವೇತನ ಚೀಟಿ/ವೇತನ ಪಡೆದ ಬ್ಯಾಂಕ್ ಪಾಸ್ ಬುಕ್ ಹಾಗೂ ಇ-ಶ್ರಮ್ ಕಾರ್ಡ್ ದಾಖಲೆಗಳು ಅವಶ್ಯವಿರುತ್ತದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...