alex Certify ನರೇಗಾ ಕೂಲಿ ಕಾರ್ಮಿಕರಿಗೆ ಗುಡ್ ನ್ಯೂಸ್: ನಗದು ರಹಿತ ಚಿಕಿತ್ಸೆ, ವಿಮೆ ಸೌಲಭ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನರೇಗಾ ಕೂಲಿ ಕಾರ್ಮಿಕರಿಗೆ ಗುಡ್ ನ್ಯೂಸ್: ನಗದು ರಹಿತ ಚಿಕಿತ್ಸೆ, ವಿಮೆ ಸೌಲಭ್ಯ

ಬಳ್ಳಾರಿ: ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯು ಗ್ರಾಮೀಣ ಪ್ರದೇಶದ ಅಕುಶಲ ಕಾರ್ಮಿಕರನ್ನೂ ಸರ್ಕಾರದ ಯೋಜನೆಯ ಮುಖ್ಯವಾಹಿನಿಗೆ ತರಲು ವಿವಿಧ ವಿಮಾ, ಸೌಲಭ್ಯಗಳಡಿ ಸವಲತ್ತು ಕಲ್ಪಿಸಲು ಮುಂದಾಗಿದೆ.

ಈ ಹಿನ್ನೆಲೆಯಲ್ಲಿ ವಿವಿಧ ವಿಮಾ ಯೋಜನೆಯಡಿ ಅರ್ಹ ನೋಂದಾಯಿತ ಕೂಲಿ ಕಾರ್ಮಿಕರಿಗೆ ವಿಮಾ ಖಾತ್ರಿ ಸೌಲಭ್ಯ ಒದಗಿಸಲು ಕೇಂದ್ರ ಸರ್ಕಾರದ ನಾನಾ ವಿಮೆ ಮತ್ತು ಆರೋಗ್ಯ ಯೋಜನೆಗಳ ಸೌಲಭ್ಯಗಳಲ್ಲಿ ನೋಂದಣಿ ಮಾಡಿಕೊಳ್ಳಬೇಕಿದೆ.

ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ:

ಜೀವಕ್ಕಿದೆ ಜೀವ ವಿಮೆ ಎಂಬ ಘೋಷ ವ್ಯಾಕ್ಯದಡಿ ಈ ಯೋಜನೆಯಲ್ಲಿ ಕೂಲಿ ಕಾರ್ಮಿಕರು ವಾರ್ಷಿಕ 330 ರೂ. ಕಂತು ಪಾವತಿಸಿ 2 ಲಕ್ಷ ರೂ. ಜೀವ ವಿಮೆ ಸೌಲಭ್ಯ ಪಡೆಯಬಹುದಾಗಿದೆ. ಗ್ರಾಮೀಣ ಪ್ರದೇಶದ 18 ರಿಂದ 50 ವಯೋಮಿತಿಯ ಫಲಾನುಭವಿಗಳಿಗೆ ಈ ಸೌಲಭ್ಯ ಲಭ್ಯವಾಗಲಿದೆ.

ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ:

ಅಪಘಾತ ಸಂದರ್ಭ ಆಪದ್ಬಾಂಧವ ಎಂಬ ಘೋಷವ್ಯಾಕ್ಯದ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಯಡಿ ಕೂಲಿ ಕಾರ್ಮಿಕರು ವಾರ್ಷಿಕ 12 ರೂ. ಕಂತು ಪಾವತಿಸುವ 18 ರಿಂದ 70 ವಯೋಮಾನದ ವ್ಯಕ್ತಿಗಳಿಗೆ ಅಪಘಾತದಿಂದ ಮರಣ ಹೊಂದಿದಲ್ಲಿ ಅಥವಾ ಶಾಶ್ವತ ದುರ್ಬಲತೆ ಹೊಂದಿದಲ್ಲಿ 2 ಲಕ್ಷ ರೂ. ಹಾಗೂ ಭಾಗಶಃ ಅಂಗವೈಕಲ್ಯಕ್ಕೆ 1 ಲಕ್ಷ ರೂ.ವರೆಗೆ ವಿಮೆ ಸೌಲಭ್ಯ ಪಡೆಯಬಹುದಾಗಿದೆ.

ಕಾರ್ಮಿಕರು ಸ್ವಯಂ ಆಗಿ ಇ-ಶ್ರಮ್ ಪೋರ್ಟ್‍ನಲ್ಲಿ ಉಚಿತವಾಗಿ ನೊಂದಾಯಿಸಬಹುದಾಗಿದ್ದು, ಗುರುತಿನ ಚೀಟಿಯನ್ನು ನೋಂದಾಯಿತ ಸ್ಥಳದಲ್ಲೇ ಪಡೆಯಬಹುದಾಗಿದೆ.

ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನೆ:

ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನೆಯಲ್ಲಿ ನೋಂದಾಯಿತ ಸಾರ್ವಜನಿಕ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಅರ್ಹ ಕುಟುಂಬಗಳಿಗೆ ವಾರ್ಷಿಕ 5 ಲಕ್ಷ ರೂ.ವರೆಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡಲಾಗುವುದು. ಇದಕ್ಕೆ ಯಾವುದೇ ಕಂತು ಪಾವತಿಸುವಂತಿಲ್ಲ.

ಈ ಯೋಜನೆಗಳ ಲಾಭ ಪಡೆಯಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಗ್ರಾಮ ಪಂಚಾಯತಿಯ ಪಿಡಿಓಗಳು, ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಹಾಗೂ ಸ್ಥಳೀಯ ಬ್ಯಾಂಕುಗಳನ್ನು ಸಂಪರ್ಕಿಸಿ ನೊಂದಾಯಿಸಿಕೊಳ್ಳಬಹುದು ಎಂದು ಜಿಪಂ ಸಿಇಒ ಕೆ.ಆರ್.ನಂದಿನಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...