ಬೆಂಗಳೂರು : ಪೊಲೀಸರ ಅಂತರ್ ಜಿಲ್ಲಾ ವರ್ಗಾವಣೆ ಸಾಧ್ಯವಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.
ಭಟ್ಕಳದಲ್ಲಿ ಮಾತನಾಡಿದ ಗೃಹ ಸಚಿವ ಜಿ ಪರಮೇಶ್ವರ್ ಬೇರೆ ಇಲಾಖೆಯ ರೀತಿ ನಮ್ಮಲ್ಲಿ ಅಂತರ್ ಜಿಲ್ಲೆ ವರ್ಗಾವಣೆ ಸಾಧ್ಯವಿಲ್ಲ. ಪೊಲೀಸ್ ಇಲಾಖೆಯಲ್ಲಿ ಅರ್ಜಿ ಸಲ್ಲಿಸಿದ ತಕ್ಷಣ ವರ್ಗಾವಣೆ ಮಾಡಲು ಸಾಧ್ಯವಿಲ್ಲ. ಹಲವು ಪ್ರಕರಣಗಳು ವಿಚಾರಣೆಯ ಹಂತದಲ್ಲಿರುತ್ತದೆ. ಅಂತಹ ಸಂದರ್ಭದಲ್ಲಿ ವರ್ಗಾವಣೆ ಮಾಡಿದ್ರೆ ಕೇಸಿನ ಸ್ವರೂಪವೇ ಬದಲಾಗಬಹುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.