ಮಧ್ಯಪ್ರದೇಶದ 230 ಸ್ಥಾನಗಳಿಗೆ ನವೆಂಬರ್ 17 ರಂದು ಮತದಾನ ನಡೆದಿದ್ದು, ಇಲ್ಲಿ ಶೇ.77ಕ್ಕೂ ಹೆಚ್ಚು ಮತದಾನವಾಗಿದೆ.
ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟವಾಗಲಿದ್ದು, ಅದಕ್ಕೂ ಮುನ್ನ ಎಲ್ಲರೂ ಚುನಾವಣೋತ್ತರ ಸಮೀಕ್ಷೆಗಾಗಿ ಕಾಯುತ್ತಿದ್ದಾರೆ.
ಇಂದು ಸಂಜೆ 5.30 ರ ನಂತರ ಯಾವುದೇ ಸಮಯದಲ್ಲಿ ಚುನಾವಣೋತ್ತರ ಸಮೀಕ್ಷೆಗಳು ಬರಬಹುದು. ಇದರೊಂದಿಗೆ, ಜನರ ಕುತೂಹಲಕ್ಕೆ ತೆರೆ ಬೀಳಲಿದೆ. ಚುನಾವಣೋತ್ತರ ಸಮೀಕ್ಷೆಗಳಲ್ಲಿ, ಮಧ್ಯಪ್ರದೇಶದಲ್ಲಿ ಯಾರು ಸರ್ಕಾರ ರಚಿಸಲಿದ್ದಾರೆ ಎಂಬುದು ಬಹುತೇಕ ಸ್ಪಷ್ಟವಾಗಲಿದೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆಯೋ ಅಥವಾ ಕಾಂಗ್ರೆಸ್ ಆಡಳಿತ ನಡೆಸಲಿದೆಯೋ ಎಂಬುದನ್ನು ಕಾದು ನೋಡಬೇಕಾಗಿದೆ.