ಬೆಂಗಳೂರು: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸೆಪ್ಟಂಬರ್ 15ರಂದು ವಿಧಾನಸೌಧ ಮುಂಭಾಗ ಸಂವಿಧಾನ ಪೀಠಿಕೆ ಓದುವ ಕಾರ್ಯ ಕ್ರಮಕ್ಕೆ ಚಾಲನೆ ನೀಡಲಾಗುವುದು.
ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ. ಮಹಾದೇವಪ್ಪ ಈ ಬಗ್ಗೆ ಮಾಹಿತಿ ನೀಡಿದ್ದು, ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಆನ್ಲೈನ್ ನಲ್ಲಿ ಎರಡು ಕೋಟಿ ಜನ ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಭಾರತ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿದೆ. ಮೂಲಭೂತ ಕರ್ತವ್ಯಗಳನ್ನು ಯಾರೂ ಪಾಲಿಸುತ್ತಿಲ್ಲ. ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮವನ್ನು ಮಕ್ಕಳಲ್ಲಿ ಸಂವಿಧಾನದ ಉದ್ದೇಶ ಅರ್ಥ ಆಗಬೇಕು ಎಂಬ ಹಿನ್ನೆಲೆಯಲ್ಲಿ ಆಂದೋಲನದ ರೀತಿ ಆಯೋಜಿಸಲಾಗುತ್ತಿದೆ. ಪ್ರಜಾಪ್ರಭುತ್ವದ ಯಶಸ್ಸು ಪೀಠಿಕೆಯಲ್ಲಿದ್ದು, ಎಲ್ಲರೂ ಸಹೋದರತೆಯಿಂದ ಬಾಳಲು ಇದು ಉಪಯೋಗವಾಗಿದೆ. ಮುಂದಿನ ಪೀಳಿಗೆಗೆ ಇದನ್ನು ಅರ್ಥೈಸಬೇಕು. ಜಾತಿ ಧರ್ಮಗಳ ನಡುವೆ ಸಂಘರ್ಷ ತಪ್ಪಿಸಬೇಕು. ಸಂವಿಧಾನದಲ್ಲಿ ಎಲ್ಲರೂ ಸಮಾನರು ಎಂದು ಹೇಳಿದ್ದಾರೆ.