alex Certify ಪ್ರತಿ ವರ್ಷ ಅಂತಾರಾಷ್ಟ್ರೀಯ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿ: ‘ಅಕ್ಕ’ ಅಧ್ಯಕ್ಷ ಅಮರನಾಥ ಗೌಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರತಿ ವರ್ಷ ಅಂತಾರಾಷ್ಟ್ರೀಯ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿ: ‘ಅಕ್ಕ’ ಅಧ್ಯಕ್ಷ ಅಮರನಾಥ ಗೌಡ

ಮಂಡ್ಯ: ಪ್ರತಿ ವರ್ಷ ಅಂತಾರಾಷ್ಟ್ರೀಯ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿ ಎಂದು ಅಮೆರಿಕ ಕನ್ನಡ ಕೂಟ(ಅಕ್ಕ)ದ ಅಧ್ಯಕ್ಷ ಅಮರನಾಥ ಗೌಡ ಹೇಳಿದರು.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ರಾಜಮಾತೆ ಕೆಂಪನಂಜಮಣ್ಣಿ ಮತ್ತು ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಧಾನ ವೇದಿಕೆಯಲ್ಲಿ ಆಯೋಜಿಸಿದ್ದ “ಜಾಗತಿಕ ನೆಲೆಯಲ್ಲಿ ಕನ್ನಡ ಕಟ್ಟುವ ಬಗೆ” ವಿಷಯದ ಬಗ್ಗೆ ನಡೆದ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿದೇಶದಲ್ಲಿ 40 ಲಕ್ಷಕ್ಕೂ ಅಧಿಕ ಕನ್ನಡಿಗರಿದ್ದು, ಅವರಲ್ಲಿ 5 ಲಕ್ಷಕ್ಕೂ ಅಧಿಕ ಕನ್ನಡಿಗರು ಅಮೆರಿಕದಲ್ಲೇ ಇದ್ದಾರೆ. ಅಕ್ಕ ಸಮೇಳನದ ಮೂಲಕ ವಿದೇಶದಲ್ಲಿ ಕನ್ನಡ ಕಟ್ಟುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.

ವಿದೇಶದಲ್ಲಿ ಕನ್ನಡ ಕಟ್ಟುವುದು ಸವಾಲಿನ ಕೆಲಸ. ಆದರೂ ಕನ್ನಡತನವನ್ನು ಗಟ್ಟಿಗೊಳಿಸುವ ಕನ್ನಡದ ಲಿಪಿ ಉಳಿಸುವ ಕೆಲಸವನ್ನು ಮಾಡಲಾಗುತ್ತಿದೆ ಎಂದರು.

ಬಹರೇನ್ ನ ಕಿರಣ್ ಉಪಾಧ್ಯಾಯ ಅವರು ಆಶಯ ನುಡಿಗಳನ್ನಾಡಿದರು. ವಿದೇಶದಲ್ಲಿರುವ ಕನ್ನಡಿಗರ ಸಮಸ್ಯೆಗಳು, ಪರಿಹಾರಗಳು ವಿಷಯದ ಬಗ್ಗೆ ಕತಾರ್ ನ ಹೆಚ್. ಕೆ. ಮಧು ಅವರು, ಜಗತ್ತಿನ ರಾಷ್ಟ್ರಗಳಲ್ಲಿ ಮಾತೃಭಾಷೆಯನ್ನು ನೋಡುವ ಕ್ರಮ ವಿಷಯದ ಬಗ್ಗೆ ಇಂಗ್ಲೆಂಡ್ ನ ಅಶ್ವಿನ್ ಶೇಷಾದ್ರಿ, ಹೊರನಾಡಿನಲ್ಲಿ ಕನ್ನಡದ ಅಸ್ತಿತ್ವ, ಸವಾಲುಗಳು ವಿಷಯದ ಬಗ್ಗೆ ಮಹಾರಾಷ್ಟ್ರದ ಕಮಲಾಕರ ಕಡವೆ, ವಿದೇಶದಲ್ಲಿರುವ ಕನ್ನಡ ಶಾಲೆಗಳ ಸ್ಥಿತಿಗತಿಗಳು ವಿಷಯದ ಬಗ್ಗೆ ಯುಎಇನ ಶಶಿಧರ ನಾಗರಾಜಪ್ಪ ಅವರು ವಿಷಯ ಮಂಡಿಸಿದರು.

ಗೋಷ್ಠಿಯಲ್ಲಿ ಕ.ಸಾ.ಪ ಅಂತರಾಷ್ಟ್ರೀಯ ಸಮನ್ವಯಾಧಿಕಾರಿ ನಿವೇದಿತ ಹಾವನೂರ, ಹೊನ್ನತ್ತಿ ಅವರು ವಿಶೇಷ ಉಪಸ್ಥಿತಿ ವಹಿಸಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...