
ನಿನ್ನೆಯಷ್ಟೆ ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ಕೋಮಾದಲ್ಲಿದ್ದಾರೆ. ಅವರಿಗೆ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಸಂಪೂರ್ಣ ಆಡಳಿತವನ್ನು ತಮ್ಮ ಸಹೋದರಿ ಕೈಗೆ ಕೊಟ್ಟಿದ್ದಾರೆ ಎಂಬ ವರದಿಗಳು ಹರಿದಾಡಿದ್ದವು. ಇದರ ಬೆನ್ನಲ್ಲೇ ಇದೀಗ ಕಿಮ್ ನಿಧನ ಹೊಂದಿದ್ದಾರೆ. ಶೀಘ್ರದಲ್ಲಿಯೇ ಅವರ ಸಾವಿನ ಬಗ್ಗೆ ಅಧಿಕೃತ ಘೋಷಣೆ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ.
ಹೌದು, ಕಿಮ್ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಕಳೆದ ಕೆಲವು ದಿನಗಳಿಂದಲೂ ಅವರ ಆರೋಗ್ಯ ಸರಿ ಇರಲಿಲ್ಲ ಎಂದು ಹೇಳಲಾಗುತ್ತಿದೆ. ಹೀಗಾಗಿಯೇ ಅವರು ಸಾರ್ವಜನಿಕವಾಗಿ ಎಲ್ಲಿಯೂ ಕಾಣಿಸುತ್ತಿರಲಿಲ್ಲವಂತೆ. ಆದರೆ ಇದೀಗ ಕಿಮ್ ಸಾವನ್ನಪ್ಪಿದ್ದಾರೆ ಎನ್ನುತ್ತಿವೆ ಹಲವಾರು ಮೂಲಗಳು.
ಇವರ ಸಾವಿನ ಸುದ್ದಿಯನ್ನು ಉದ್ದೇಶಪೂರ್ವಕವಾಗಿಯೇ ಮುಚ್ಚಿಡಲಾಗುತ್ತಿದೆ ಎನ್ನಲಾಗಿದೆ. ಏಕೆಂದರೆ ಉತ್ತರ ಕೊರಿಯಾದಲ್ಲಿ ಸರ್ವಾಧಿಕಾರ ಇರೋದ್ರಿಂದ ಈ ಸುದ್ದಿ ಇನ್ನು ಸ್ಪಷ್ಟವಾಗಿಲ್ಲ. ಇನ್ನು ಕಿಮ್ ಜಾಂಗ್ ಉನ್ ನಂತರ ಅವರ ಅಧಿಕಾರವನ್ನು ಕಿಮ್ ಸಹೋದರಿ ಕಿಮ್ ಯೋ ಜಾಂಗ್ ವಹಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.