alex Certify ಕೊರೊನಾ ಸಂಕಷ್ಟದ ನಡುವೆಯೂ ಹಿಂಸಾಚಾರದಿಂದ ಹೊತ್ತಿ ಉರಿಯುತ್ತಿದೆ ಅಮೆರಿಕಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಸಂಕಷ್ಟದ ನಡುವೆಯೂ ಹಿಂಸಾಚಾರದಿಂದ ಹೊತ್ತಿ ಉರಿಯುತ್ತಿದೆ ಅಮೆರಿಕಾ

ಮಹಾಮಾರಿ ಕೊರೊನಾ ಅಮೆರಿಕದಲ್ಲಿ ಅಟ್ಟಹಾಸ ಮೆರೆಯುತ್ತಿದ್ದು, ಈ ಮಾರಣಾಂತಿಕ ಸೋಂಕಿಗೆ ಈಗಾಗಲೇ ಲಕ್ಷಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. ಇದರ ಮಧ್ಯೆಯೂ ಅಮೆರಿಕಾದಲ್ಲಿ ಜನಾಂಗೀಯ ಸಂಘರ್ಷ ತಾರಕಕ್ಕೇರಿದ್ದು, ಹಿಂಸಾಚಾರದಿಂದ ಹೊತ್ತಿ ಉರಿಯುತ್ತಿದೆ.

ಆಫ್ರಿಕಾ ಮೂಲದ ಅಮೆರಿಕನ್ ಪ್ರಜೆ ಜಾರ್ಜ್ ಫ್ಲಾಯ್ಡ್ ಎಂಬಾತನನ್ನು ಮಿನ್ನಿಯಾಪೊಲೀಸ್ ನಗರದ ಪೊಲೀಸನೊಬ್ಬ ಕುತ್ತಿಗೆ ಮೇಲೆ ಕಾಲಿಟ್ಟು ಅಮಾನುಷವಾಗಿ ಕೊಂದ ಘಟನೆ ಬಳಿಕ ಇದನ್ನು ಖಂಡಿಸಿ ಪ್ರತಿಭಟನೆ ನಡೆಯುತ್ತಿದ್ದು, ಈಗ ಅದು ಹಿಂಸಾಚಾರಕ್ಕೆ ತಿರುಗಿದೆ.

ಪ್ರತಿಭಟನಾಕಾರರು ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡುತ್ತಿರುವುದಲ್ಲದೆ ಸಿಕ್ಕಸಿಕ್ಕ ವಾಹನಗಳಿಗೆ ಬೆಂಕಿ ಹಚ್ಚುತ್ತಿದ್ದಾರೆ. ಅಲ್ಲದೆ ಅಂಗಡಿ-ಮುಂಗಟ್ಟುಗಳನ್ನು ಲೂಟಿ ಮಾಡುತ್ತಿದ್ದು, ಹಿಂಸಾಚಾರ ಈಗ 160 ನಗರಗಳಿಗೆ ವ್ಯಾಪಿಸಿದೆ.

ಕೊರೊನಾ ವಿಚಾರದಲ್ಲಿ ಆರಂಭದಲ್ಲೇ ಸಂಪೂರ್ಣ ನಿರ್ಲಕ್ಷ್ಯ ವಹಿಸುವ ಮೂಲಕ ವ್ಯಾಪಕವಾಗಿ ಹರಡಲು ಕಾರಣಕರ್ತರಾಗಿದ್ದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ವಿಚಾರ ನಿರ್ವಹಿಸಲೂ ವಿಫಲರಾಗಿದ್ದಾರೆಂಬ ಮಾತುಗಳು ಕೇಳಿಬರುತ್ತಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...