ಮಹಾಮಾರಿ ಕೊರೊನಾ ಭಾರತದಲ್ಲಿ ದಿನೇ ದಿನೇ ವ್ಯಾಪಕವಾಗುತ್ತಿದೆ. ಪ್ರಸ್ತುತ ದೇಶದಲ್ಲಿ 2.97 ಲಕ್ಷ ಮಂದಿ ಸೋಂಕಿತರಿದ್ದು ವಿಶ್ವ ರಾಷ್ಟ್ರಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಬಂದು ನಿಂತಿದೆ. ಅಲ್ಲದೆ ಸೋಂಕು ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ವಿಶ್ವದ ದೊಡ್ಡಣ್ಣ ಅಮೆರಿಕಾ 20,71,607 ಮಂದಿ ಸೋಂಕಿತರೊಂದಿಗೆ ಮೊದಲ ಸ್ಥಾನದಲ್ಲಿದ್ದು, ನಂತರದ ಸ್ಥಾನದಲ್ಲಿರುವ ಬ್ರೆಜಿಲ್ ನಲ್ಲಿ 7,75,581 ಮಂದಿ ಸೋಂಕಿತರಿದ್ದಾರೆ.
ಇನ್ನು ಮೂರನೇ ಸ್ಥಾನದಲ್ಲಿರುವ ರಷ್ಯಾದಲ್ಲಿ 5,02,436 ಮಂದಿ ಸೋಂಕಿತರಿದ್ದು, 2,97,001 ಸೋಂಕಿತರೊಂದಿಗೆ ಭಾರತ ನಾಲ್ಕನೇ ಸ್ಥಾನದಲ್ಲಿದೆ. ಭಾರತದಲ್ಲಿ ಸೋಂಕಿತರ ಸಂಖ್ಯೆ ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಲಿದೆ ಎನ್ನಲಾಗಿದ್ದು, ಜುಲೈ ಬಳಿಕ ಪ್ರಕರಣಗಳ ಸಂಖ್ಯೆ ಇಳಿಕೆಯಾಗಬಹುದೆಂದು ಹೇಳಲಾಗಿದೆ.