ಕೊರೊನಾ ಸೋಂಕು ವ್ಯಕ್ತಿಯಿಂದ ವ್ಯಕ್ತಿಗೆ ಮಾತ್ರ ಹರಡೋದಲ್ಲದೆ ಗಾಳಿಯ ಮುಖಾಂತರವೂ ಹರಡಲಿದೆ ಎಂಬ ಮಾಹಿತಿ ಇತ್ತೀಚೆಗೆ ಹೊರ ಬಂದಿದೆ. ಈ ಸುದ್ದಿ ನಿಜಕ್ಕೂ ಎಲ್ಲರಲ್ಲಿಯೂ ಆತಂಕ ಮೂಡಿಸಿದೆ. ಈ ವಾದವನ್ನು ಇದೀಗ ವಿಶ್ವ ಆರೋಗ್ಯ ಸಂಸ್ಥೆಯೂ ಒಪ್ಪಿಕೊಂಡಿದೆಯಾ ಅನ್ನೋ ಪ್ರಶ್ನೆ ಮೂಡಿದೆ.
ಹೌದು, 32 ದೇಶಗಳ 239 ವಿಜ್ಞಾನಿಗಳು ವಿಶ್ವ ಆರೋಗ್ಯ ಸಂಸ್ಥೆಗೆ ಪತ್ರ ಬರೆದು ಕೊರೊನಾ ರೋಗದ ಸೋಂಕು ಗಾಳಿಯ ಮುಖಾಂತರವೂ ಹರಡಲಿದೆ. ಈ ಬಗ್ಗೆ ಗಂಭೀರವಾಗಿ ಗಮನಹರಿಸಿ ಕ್ರಮ ಕೈಗೊಳ್ಳಿ ಎಂದು ಸಲಹೆ ನೀಡಿದ್ದರು. ಈ ಬಗ್ಗೆ ಎಚ್ಚೆತ್ತುಕೊಂಡ ವಿಶ್ವಸಂಸ್ಥೆ ವಿಜ್ಞಾನಿಗಳ ಸಲಹೆಯನ್ನು ಸ್ವಾಗತಿಸುತ್ತೇವೆ. ಹಾಗೂ ಅದನ್ನು ಪರಿಶೀಲನೆ ಮಾಡುತ್ತೇವೆ ಎಂದು ಹೇಳಿದೆ.
ಗಾಳಿಯಲ್ಲಿ ಕೊರೊನಾ ಸೋಂಕು ಹರಡುವ ಬಗ್ಗೆ ಆತಂಕ ವ್ಯಕ್ತವಾದ ಬೆನ್ನಲ್ಲೇ ವಿಶ್ವಸಂಸ್ಥೆಯೂ ಇದರ ಬಗ್ಗೆ ಸಂಶೋಧನೆ ಅವಶ್ಯಕತೆ ಇದೆ. ವಿಜ್ಞಾನಿಗಳ ವಾದವನ್ನ ನಾವು ಬೆಂಬಲಿಸುತ್ತೇವೆ ಎಂದು ತಾಂತ್ರಿಕ ಮುಖ್ಯಸ್ಥ ಬೆನೆಡೆಟ್ಟಾ ಅಲೆಗ್ರಾಂಜಿ ಹೇಳಿದ್ದಾರೆ.