alex Certify ಬೆಚ್ಚಿಬೀಳಿಸುವಂತಿದೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿರುವ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಚ್ಚಿಬೀಳಿಸುವಂತಿದೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿರುವ ಹೇಳಿಕೆ

ಮಹಾಮಾರಿ ಕರೋನಾ ವೈರಸ್ ವಿಶ್ವದ ದೊಡ್ಡಣ್ಣ ಅಮೆರಿಕಾದಲ್ಲಿ ಮರಣ ಮೃದಂಗ ಬಾರಿಸುತ್ತಿದ್ದು, ಈವರೆಗೆ ಅಲ್ಲಿ 72,695 ಮಂದಿ ಬಲಿಯಾಗಿದ್ದಾರೆ. 12,40,809 ಮಂದಿ ಸೋಂಕಿತರಿದ್ದು, ಈ ಪೈಕಿ ಹಲವು ಮಂದಿ ಸ್ಥಿತಿ ಗಂಭೀರವಾಗಿರುವ ಪರಿಣಾಮ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗಲಿದೆ.

ಇದರ ಮಧ್ಯೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿರುವ ಹೇಳಿಕೆ ಬೆಚ್ಚಿಬೀಳಿಸುವಂತಿದೆ. ದೇಶದಲ್ಲಿ ಕರೋನಾ ಕಾಣಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಅರಿಜೋನಾದಲ್ಲಿರುವ ಹನಿಬೆಲ್ ಮಾಸ್ಕ್ ತಯಾರಿಕಾ ಕಂಪನಿಗೆ ಡೊನಾಲ್ಡ್ ಟ್ರಂಪ್ ಭೇಟಿ ನೀಡಿದ್ದು, ಆರ್ಥಿಕತೆ ಸರಿಪಡಿಸಲು ಲಾಕ್ ಡೌನ್ ಸಡಿಲಿಕೆ ಮಾಡುವುದು ಅನಿವಾರ್ಯ ಎಂದಿದ್ದಾರೆ.

ಲಾಕ್ ಡೌನ್ ಸಡಿಲಿಕೆಯಿಂದಾಗಿ ದೇಶದಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಲಿದೆ ಎಂದು ಡೊನಾಲ್ಡ್ ಟ್ರಂಪ್ ತಿಳಿಸಿದ್ದು, ಈಗಾಗಲೇ 70 ಸಾವಿರಕ್ಕೂ ಅಧಿಕ ಮಂದಿ ಅಮೆರಿಕದಲ್ಲಿ ಸಾವನ್ನಪ್ಪಿದ್ದಾರೆ. ಟ್ರಂಪ್ ಹೇಳಿಕೆಯಿಂದಾಗಿ ಸಾವಿನ ಸಂಖ್ಯೆ ಇನ್ನೆಷ್ಟು ಹೆಚ್ಚಲಿದೆಯೋ ಎಂಬ ಆತಂಕ ಈಗ ಎದುರಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...