ಬೆಂಗಳೂರು: ಇಡೀ ವಿಶ್ವಕ್ಕೆ ಕೊರೊನಾ ಸೋಂಕು ಹರಡಿದ್ದ ಚೀನಾಗೆ ಇದೀಗ ಕೊರೊನಾ ಎರಡನೇ ಅಲೆಯ ಭೀತಿ ಆರಂಭವಾಗಿದೆ. ಇದರ ಬೆನ್ನಲ್ಲೇ ಭಾರತ ಸೇರಿದಂತೆ ಹಲವು ದೇಶಗಳ ಪ್ರಜೆಗಳಿಗೆ ಚೀನಾ ನಿರ್ಬಂಧ ವಿಧಿಸಿದೆ.
ಭಾರತದ ಪ್ರಜೆಗಳಿಗೆ ಚೀನಾ ತಾತ್ಕಾಲಿಕ ನಿರ್ಬಂಧ ವಿಧಿಸಿರುವ ಬಗ್ಗೆ ನವದೆಹಲಿಯಲ್ಲಿರುವ ಚೀನಾ ರಾಯಭಾರ ಕಚೇರಿ ಮಾಹಿತಿ ನೀಡಿದೆ. ಕೋವಿಡ್ ಸಾಂಕ್ರಾಮಿಕ ರೋಗ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿದೇಶಿಗರಿಗೆ ತಾತ್ಕಾಲಿಕವಾಗಿ ವೀಸಾ ನಿರ್ಬಂಧ ಹೇರಲಾಗಿದೆ ಎಂದು ತಿಳಿಸಿದೆ.
ಭಾರತದ ಪ್ರಜೆಗಳಿಗೆ ಮಾತ್ರವಲ್ಲ, ಬ್ರಿಟನ್, ಬೆಲ್ಜಿಯಂ, ಫ್ರಾನ್ಸ್, ಬಾಂಗ್ಲಾದೇಶ ಸೇರಿದಂತೆ ಇನ್ನೂ ಹಲವು ದೇಶಗಳಿಗೆ ಈ ನಿರ್ಬಂಧ ವಿಧಿಸಲಾಗಿದೆ.