ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಇಂದು ಭೂಮಿ ಪೂಜೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಜೊತೆ ಅಯೋಧ್ಯೆಯತ್ತ ತೆರಳಿದ್ದಾರೆ.
ಭಾರತದ ಕೋಟ್ಯಾಂತರ ಮಂದಿ ಈ ಸಾರ್ಥಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಕಾದು ಕುಳಿತಿದ್ದು, ದೂರದರ್ಶನದಲ್ಲಿ ಶಿಲಾನ್ಯಾಸ ಕಾರ್ಯಕ್ರಮ ನೇರ ಪ್ರಸಾರವಾಗುವ ಗಳಿಗೆಯ ನಿರೀಕ್ಷೆಯಲ್ಲಿದ್ದಾರೆ. ದೇಶದಾದ್ಯಂತ ಹಬ್ಬದ ವಾತಾವರಣ ಕಂಡು ಬರುತ್ತಿದ್ದು, ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಲಾಗಿದೆ.
ವಿದೇಶಗಳಲ್ಲಿ ನೆಲೆಸಿರುವ ಭಾರತೀಯರೂ ಸಹ ಶ್ರೀರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮದ ಸಂಭ್ರಮಾಚರಣೆಯಲ್ಲಿ ತೊಡಗಿದ್ದು, ಅಮೆರಿಕಾ ಸೇರಿದಂತೆ ಹಲವು ದೇಶಗಳಲ್ಲಿ ಭಾರತೀಯರು ತಮ್ಮ ತಮ್ಮ ಮನೆಗಳಲ್ಲಿ ಪೂಜೆ ನೆರವೇರಿಸಿದ್ದಾರೆ. ಕೆಲವರು ರಾಮನಾಮ ಜಪ ಮಾಡುತ್ತಾ ನೇರ ಪ್ರಸಾರ ಕಾರ್ಯಕ್ರಮ ವೀಕ್ಷಣೆಗೆ ಸಿದ್ಧತೆ ನಡೆಸಿದ್ದಾರೆ.