ವಿಶ್ವದಾದ್ಯಂತ ಕೊರೊನಾ ಅಬ್ಬರ ನಿಲ್ಲುವಂತೆ ಕಾಣ್ತಿಲ್ಲ. ಸಾಂಕ್ರಾಮಿಕ ರೋಗವು ಅಮೆರಿಕದಲ್ಲಿ ತೀವ್ರ ಸ್ವರೂಪವನ್ನು ಪಡೆದುಕೊಂಡಿದೆ. ಇದುವರೆಗೆ 36 ಲಕ್ಷಕ್ಕೂ ಹೆಚ್ಚು ಜನರು ಸೋಂಕಿಗೆ ಒಳಗಾಗಿದ್ದಾರೆ.
ಮಾಹಿತಿ ಪ್ರಕಾರ ಅಮೆರಿಕಾದಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 1,39,128 ಕ್ಕೆ ತಲುಪಿದೆ. ಸೋಂಕಿತರ ಸಂಖ್ಯೆ 36,38,002ರಷ್ಟಿದೆ. ಅಮೆರಿಕದಲ್ಲಿ 10.90 ಲಕ್ಷಕ್ಕೂ ಹೆಚ್ಚು ಜನರು ಕೊರೊನಾ ಸೋಂಕಿಗೆ ಸೆಡ್ಡು ಹೊಡೆದಿದ್ದಾರೆ. ನ್ಯೂಯಾರ್ಕ್ ಮತ್ತು ನ್ಯೂಜೆರ್ಸಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿದೆ.
ದಕ್ಷಿಣ ಆಫ್ರಿಕಾದಲ್ಲಿ ಕಳೆದ ಒಂದು ದಿನದಲ್ಲಿ 13,373ಕ್ಕೂ ಹೆಚ್ಚು ಹೊಸ ಪ್ರಕರಣ ದಾಖಲಾಗಿದೆ. ಒಟ್ಟು ಪೀಡಿತರ ಸಂಖ್ಯೆ 3,37,594ಕ್ಕೇರಿದೆ. ಮಹಾಮಾರಿಗೆ 135 ಜನರು ಬಲಿಯಾಗಿದ್ದಾರೆ.
ಇನ್ನು ಬ್ರೆಜಿಲ್ ನಲ್ಲಿ ಕಳೆದ 24 ಗಂಟೆಗಳಲ್ಲಿ 34,177 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಸೋಂಕಿತರ ಸಂಖ್ಯೆ 20,46,328 ತಲುಪಿದೆ. ಇಲ್ಲಿ ಮೃತರ ಸಂಖ್ಯೆ 77,851 ದಾಟಿದೆ.