alex Certify ವಿಶ್ವದ ದೊಡ್ಡಣ್ಣನಾಗಿ ಜೋ ಬಿಡೆನ್ ಆಯ್ಕೆ; ಟ್ರಂಪ್ ಗೆ ಹೀನಾಯ ಸೋಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶ್ವದ ದೊಡ್ಡಣ್ಣನಾಗಿ ಜೋ ಬಿಡೆನ್ ಆಯ್ಕೆ; ಟ್ರಂಪ್ ಗೆ ಹೀನಾಯ ಸೋಲು

ಅಮೆರಿಕಾ ಅಧ್ಯಕ್ಷೀಯ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ನಿರೀಕ್ಷೆಯಂತೆ ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿ ಜೋ ಬಿಡೆನ್ ಅಮೆರಿಕಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ವಿಶ್ವದ ದೊಡ್ಡಣ್ಣನಾಗಿ ಪುನರಾಯ್ಕೆ ಬಯಸಿದ್ದ ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೀನಾಯವಾಗಿ ಸೋಲನುಭವಿಸಿದ್ದಾರೆ.

ಈ ಮೂಲಕ ಜೋ ಬಿಡೆನ್ ಅಮೆರಿಕಾದ 46ನೇ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ 270 ಮ್ಯಾಜಿಕ್ ಸಂಖ್ಯೆಯಗಿದ್ದು, ಬೈಡನ್ 284 ಮತಗಳಿಸಿದ್ದರೆ, ಟ್ರಂಪ್ 214 ಮತಗಳಿಗೆ ತೃಪ್ತಿ ಪಟ್ಟುಕೊಂಡಿದ್ದಾರೆ.

ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ತಮ್ಮ ಗೆಲುವು ಖಚಿತವಾಗುತ್ತಿದ್ದಂತೆಯೇ ಬಿಡೆನ್, ದೇಶವಾಸಿಗಳಿಗೆ ಧನ್ಯವಾದ ತಿಳಿಸಿದ್ದಾರೆ.

ಇನ್ನು ಜೋ ಬಿಡೆನ್ ಅಮೆರಿಕಾ ಅಧ್ಯಕ್ಷರಾಗಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಭಾರತೀಯ ಮೂಲದ ಕಮಲಾ ಹ್ಯಾರಿಸ್ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...