ಇಸ್ಲಾಮಾಬಾದ್: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಹೋಮ್ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತು ಪಾಕ್ ಆರೋಗ್ಯ ಸಚಿವ ಫೈಸಲ್ ಸುಲ್ತಾನ್ ಮಾಹಿತಿ ನೀಡಿದ್ದು, ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಮನೆಯಲ್ಲಿಯೇ ಐಸೋಲೇಟ್ ಆಗಿದ್ದಾರೆ ಎಂದು ತಿಳಿಸಿದ್ದಾರೆ.
ಬೈ ಎಲೆಕ್ಷನ್ ಗೆ ಕೊರೊನಾ ಕಠಿಣ ನಿಯಮ ಅನ್ವಯವಾಗಲ್ಲ: ಸಿಎಂ ಹೇಳಿಕೆ
ಇಮ್ರಾನ್ ಖಾನ್ ಇತ್ತೀಚೆಗೆ ಚೀನಾದ ಸಿನೋಫಾರ್ಮ್ ವ್ಯಾಕ್ಸಿನ್ ಪಡೆದುಕೊಂಡಿದ್ದು, ಲಸಿಕೆ ಪಡೆದ 48 ಗಂಟೆಯಲ್ಲೇ ಕೊರೊನಾ ಪಾಸಿಟಿವ್ ಬಂದಿದೆ.