alex Certify ಶಾಕಿಂಗ್ ನ್ಯೂಸ್: ಕೊರೊನಾ ಸೋಂಕು ಪೀಡಿತ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತಕ್ಕೆ 10 ನೇ ಸ್ಥಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್ ನ್ಯೂಸ್: ಕೊರೊನಾ ಸೋಂಕು ಪೀಡಿತ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತಕ್ಕೆ 10 ನೇ ಸ್ಥಾನ

ಭಾರತದಲ್ಲಿ ವಕ್ಕರಿಸಿರುವ ಕೊರೊನಾ ಮಹಾಮಾರಿ ದಿನೇ ದಿನೇ ವ್ಯಾಪಕವಾಗುತ್ತಿದೆ. ಆರಂಭದಲ್ಲಿ ಲಾಕ್ ಡೌನ್ ಘೋಷಣೆ ಮಾಡಿ ಇದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಿದ ಕಾರಣ ಸೋಂಕು ಇಷ್ಟು ಮಟ್ಟಿಗೆ ವ್ಯಾಪಿಸಿರಲಿಲ್ಲ. ಈಗ ಲಾಕ್ ಡೌನ್ ಬಹುತೇಕ ಸಡಿಲಗೊಂಡಿದ್ದು, ಇದರ ಬಳಿಕ ಸೋಂಕು ಪೀಡಿತರ ಸಂಖ್ಯೆಯೂ ಏರಿಕೆಯಾಗುತ್ತಿದೆ.

ಕೊರೊನಾ ಸೋಂಕು ಪೀಡಿತ ಪ್ರಮುಖ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ 10ನೇ ಸ್ಥಾನದಲ್ಲಿದ್ದು, ಏಷ್ಯಾದಲ್ಲಿ ಮೊದಲ ಸ್ಥಾನಕ್ಕೆ ಬಂದು ನಿಂತಿದೆ. ಮುಂದಿನ ದಿನಗಳಲ್ಲಿ ಸೋಂಕು ಮತ್ತಷ್ಟು ವ್ಯಾಪಿಸಲಿದೆ ಎಂದು ಹೇಳಲಾಗುತ್ತಿದ್ದು, ಇದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಭಾರತದಲ್ಲಿ ಈವರೆಗೆ 1,44,069 ಮಂದಿ ಸೋಂಕು ಪೀಡಿತರಾಗಿದ್ದು, 4,117 ಮಂದಿ ಈ ಮಹಾಮಾರಿಗೆ ಬಲಿಯಾಗಿದ್ದಾರೆ.

ಇನ್ನುಳಿದ ಕೊರೊನಾ ಸೋಂಕು ಪೀಡಿತ 9 ರಾಷ್ಟ್ರಗಳ ಪಟ್ಟಿ ಇಂತಿದೆ. ವಿಶ್ವದ ದೊಡ್ಡಣ್ಣ ಅಮೆರಿಕ ಮೊದಲನೇ ಸ್ಥಾನದಲ್ಲಿದ್ದು ಇಲ್ಲಿ 16.86 ಲಕ್ಷ ಮಂದಿ ಸೋಂಕು ಪೀಡಿತರಾಗಿದ್ದಾರೆ. ದ್ವಿತೀಯ ಸ್ಥಾನದಲ್ಲಿರುವ ಬ್ರೆಜಿಲ್ ನಲ್ಲಿ 3.65 ಲಕ್ಷ ಮಂದಿ ಸೋಂಕು ಪೀಡಿತರಾಗಿದ್ದಾರೆ. ನಂತರದ ಸ್ಥಾನಗಳಲ್ಲಿ ರಷ್ಯಾ (3.53 ಲಕ್ಷ), ಸ್ಪೇನ್ (2.82 ಲಕ್ಷ), ಬ್ರಿಟನ್ (2.59 ಲಕ್ಷ), ಇಟಲಿ (2.29 ಲಕ್ಷ), ಫ್ರಾನ್ಸ್ (1.82 ಲಕ್ಷ), ಜರ್ಮನಿ (1.80 ಲಕ್ಷ), ಟರ್ಕಿ (1.56 ಲಕ್ಷ) ಸೋಂಕು ಪೀಡಿತರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...