ಅಮೆರಿಕಾದಲ್ಲಿ ಕೆಲಸ ಮಾಡುತ್ತಿದ್ದ ಕೇರಳ ಮೂಲದ ನರ್ಸ್ ಒಬ್ಬರು ತಮ್ಮ ಪತಿಯಿಂದಲೇ ಹತ್ಯೆಯಾಗಿರುವ ಘಟನೆ ನಡೆದಿದೆ.
26 ವರ್ಷದ ಮೆರಿನ್ ಜಾಯ್ ಹತ್ಯೆಯಾದವರಾಗಿದ್ದು, ಇವರು ದಕ್ಷಿಣ ಫ್ಲೋರಿಡಾದ ಬ್ರೋವರ್ಡ್ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ.
ಇವರು ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದ ಪತಿ ಫಿಲಿಪ್ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದು ಬಳಿಕ ತಾನೂ ಕೈ ಕೊಯ್ದುಕೊಳ್ಳುವ ಯತ್ನ ಮಾಡಿದ್ದಾನೆ.
ಫಿಲಿಪ್ ಹಾಗೂ ಮೆರಿನ್ ನಡುವೆ ಕೌಟುಂಬಿಕ ಕಲಹ ನಡೆಯುತ್ತಿದ್ದು, ಇದು ಮತ್ತೆ ಮರುಕಳಿಸಿದ್ದೇ ಈ ಕೃತ್ಯಕ್ಕೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ. ಇದೀಗ ಫಿಲಿಪ್ ನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಲಾಗಿದೆ.