ಜಾರ್ಜಿಯಾ: ಅಮೆರಿಕದ ಜಾರ್ಜಿಯಾ ಶಾಲೆಯ ಸಭಾಂಗಣಕ್ಕೆ ತೆರಳುವ ಮಾರ್ಗದಲ್ಲಿ ಸಾವಿರಾರು ಮಕ್ಕಳು ಪರಸ್ಪರ ಅಂತರ ಕಾಯ್ದುಕೊಳ್ಳದೆ, ಮಾಸ್ಕ್ ಇಲ್ಲದೆ ಓಡಾಡುತ್ತಿರುವ ಫೋಟೋ ಕೆಲ ದಿನಗಳ ಹಿಂದೆ ವೈರಲ್ ಆಗಿತ್ತು.
ಈಗ ಆ ಶಾಲೆಯ ಮೂರು ಸಿಬ್ಬಂದಿ, 6 ವಿದ್ಯಾರ್ಥಿಗಳು ಸೇರಿ 9 ಜನರಿಗೆ ಕೋವಿಡ್ ಇರುವುದು ಖಾಸಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ.
ಈ ಸಂಬಂಧ ಶಿಕ್ಷಣ ಸಂಸ್ಥೆ ಪಾಲಕರಿಗೆ ಪತ್ರ ಕಳಿಸಿದ್ದು, “ಜಿಲ್ಲೆಯಾದ್ಯಂತ ವ್ಯಾಪಕವಾಗಿ ಹರಡಿರುವ ಕೊರೊನಾ ಶಾಲೆಗೂ ಹರಡಬಹುದು ಎಂದು ನಿರೀಕ್ಷಿಸಿದ್ದೆವು. ಸಾರ್ವಜನಿಕ ಆರೋಗ್ಯ ಇಲಾಖೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ” ಎಂದು ಪತ್ರದಲ್ಲಿ ಬರೆಯಲಾಗಿದೆ.
ಆದರೆ, ಎಷ್ಟು ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ಶಾಲೆಯನ್ನು ಸೀಲ್ ಡೌನ್ ಮಾಡಲಾಗಿದೆಯೇ ಎಂಬ ಬಗ್ಗೆ ಯಾವುದೇ ಸ್ಪಷ್ಟತೆ ಪತ್ರದಲ್ಲಿ ಇಲ್ಲ. ಶಾಲೆ ಪ್ರಾರಂಭವಾದ ದಿನದ ಫೋಟೋ ವೈರಲ್ ಆಗಿತ್ತು. ಪಾಲಕರು ಮಕ್ಕಳ ಸುರಕ್ಷತೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು. ಈ ಫೋಟೋ ತೆಗೆದಾಕೆಯನ್ನು ಶಾಲೆಯಿಂದ ಅಮಾನತು ಮಾಡಲಾಗಿತ್ತು.