alex Certify ಕೊರೊನಾ ಆತಂಕದ ನಡುವೆ ಮತ್ತೊಂದು ಸಂಕಷ್ಟಕ್ಕೆ ತುತ್ತಾದ ವಿಶ್ವದ ದೊಡ್ಡಣ್ಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಆತಂಕದ ನಡುವೆ ಮತ್ತೊಂದು ಸಂಕಷ್ಟಕ್ಕೆ ತುತ್ತಾದ ವಿಶ್ವದ ದೊಡ್ಡಣ್ಣ

ಕೊರೊನಾನಾ ಮಹಾಮಾರಿ ವಿಶ್ವದ ದೊಡ್ಡಣ್ಣ ಅಮೆರಿಕಾವನ್ನು ಬೆಚ್ಚಿಬೀಳಿಸಿದೆ. ಈ ಮಾರಣಾಂತಿಕ ಸೋಂಕಿಗೆ ಈಗಾಗಲೇ ಒಂದು ಲಕ್ಷಕ್ಕೂ ಅಧಿಕ ಮಂದಿ ಬಲಿಯಾಗಿದ್ದು, 17 ಲಕ್ಷಕ್ಕೂ ಅಧಿಕ ಮಂದಿ ಸೋಂಕು ಪೀಡಿತರಾಗಿದ್ದಾರೆ.

ಇದನ್ನು ಎದುರಿಸಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಸರ್ಕಾರ ಪರದಾಡುತ್ತಿರುವ ಮಧ್ಯೆ ಮತ್ತೊಂದು ದೊಡ್ಡ ಸಂಕಷ್ಟ ಎದುರಾಗಿದ್ದು, ಹೊಸ ಸವಾಲು ಎದುರಾಗಿದೆ.

ಮಿನಿಯಾಪೊಲಿಸ್ ನಗರದ ಪೊಲೀಸನೊಬ್ಬ ಆಫ್ರಿಕಾ ಮೂಲದ ಯುವಕನನ್ನು ಅಮಾನುಷವಾಗಿ ಕೊಂದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ವರ್ಣಭೇದ ನೀತಿಯ ವಿರುದ್ಧ ಹೋರಾಟ ಆರಂಭವಾಗಿದ್ದು, ಹಿಂಸಾಚಾರಕ್ಕೆ ತಿರುಗಿದೆ.

ಪ್ರತಿಭಟನಾಕಾರರು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ್ದು, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಿದ್ದಾರೆ. ಈ ಹೋರಾಟ ಅಮೆರಿಕದ ವಿವಿಧ ಭಾಗಗಳಿಗೂ ವ್ಯಾಪಿಸುತ್ತಿದ್ದು, ಇದರ ನಿಯಂತ್ರಣಕ್ಕೆ ಸರ್ಕಾರ ಮುಂದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...