ಸಾವೋಪೋಲೋ: ಬ್ರೆಜಿಲ್ ನಲ್ಲಿ ಕೊರೋನಾ ಲಸಿಕೆ ಪಡೆದಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ. ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಮತ್ತು ಆಸ್ಟ್ರಾಜೆನಿಕಾ ಕಂಪನಿಯ ಲಸಿಕೆಯನ್ನು ಆತನಿಗೆ ನೀಡಲಾಗಿತ್ತು.
ಕ್ಲಿನಿಕಲ್ ಪ್ರಯೋಗದ ಸುರಕ್ಷತೆ ಕುರಿತಾಗಿ ಯಾವುದೇ ಕಾಳಜಿ ಇಲ್ಲ ಎಂದು ವಿಶ್ವವಿದ್ಯಾಲಯ ಹೇಳಿದೆ. ಹೀಗಿದ್ದರೂ ಲಸಿಕೆಯ ಪ್ರಯೋಗಗಳು ಮುಂದುವರೆಯಲಿವೆ ಎಂದು ಹೇಳಲಾಗಿದೆ.
ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಮತ್ತು ಆಸ್ಟ್ರಾಜೆನಿಕಾ ಸಹಯೋಗದಲ್ಲಿ ಅಭಿವೃದ್ಧಿಪಡಿಸಲಾಗಿರುವ ಕೊರೋನಾ ಲಸಿಕೆಯ ಕ್ಲಿನಿಕಲ್ ಪ್ರಯೋಗಗಳು ರೋಗಿಯ ಸಾವಿನ ನಂತರದಲ್ಲಿಯೂ ಮುಂದುವರೆಯಲಿದೆ ಎಂದು ಬ್ರೆಜಿಲ್ ಆರೋಗ್ಯ ನಿಯಂತ್ರಕ ಅನ್ವಿಸಾ ಹೇಳಿದ್ದಾರೆ.
ಈ ಪ್ರಕರಣದ ಬಗ್ಗೆ ಎಚ್ಚರಿಕೆಯಿಂದ ಮೌಲ್ಯಮಾಪನ ನಡೆಸಲಾಗಿದೆ. ವಿಚಾರಣೆ ಸಂದರ್ಭದಲ್ಲಿ ಸುರಕ್ಷತೆಯ ಬಗ್ಗೆ ಯಾವುದೇ ಆತಂಕವಿಲ್ಲ ಎಂದು ಅವರು ತಿಳಿಸಿದ್ದಾರೆ. ರೋಗಿ ಸಾವಿನ ಕುರಿತಾಗಿ ತನಿಖೆ ನಡೆಸಲಾಗುತ್ತಿದೆ. ಲಸಿಕೆಯ ಪ್ರಯೋಗದಿಂದ ಅವರು ಮೃತಪಟ್ಟಿದ್ದಾರೆ ಎಂಬುದರ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಲಸಿಕೆ ಪಡೆದ ವ್ಯಕ್ತಿ ಸಾವನ್ನಪ್ಪಿದ್ದರೂ ಪ್ರಯೋಗ ಮುಂದುವರಿಸಲಾಗಿದೆ ಎಂದು ಹೇಳಲಾಗಿದೆ.