ದೇಶವೊಂದರ ಪ್ರಧಾನಿ ಎಂದರೆ ಅವರಿಗೆ ಸಕಲ ಸೌಲಭ್ಯಗಳೂ ಲಭ್ಯವಾಗುತ್ತದೆ. ಆದರೆ ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ತಮಗೆ ಕಡಿಮೆ ಸಂಬಳ ಸಿಗುತ್ತಿದ್ದು, ಇದರಿಂದ ಜೀವನ ಸಾಗಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.
ಹೀಗಾಗಿ ಬೋರಿಸ್ ಜಾನ್ಸನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗುತ್ತಿದ್ದು, ಒಂದೊಮ್ಮೆ ಇದು ಸಂಭವಿಸಿದರೆ ಇನ್ಫೋಸಿಸ್ ಸಹಸಂಸ್ಥಾಪಕ ನಾರಾಯಣಮೂರ್ತಿಯವರ ಅಳಿಯ ರಿಷಿ ಸುನಾಕ್ ಬ್ರಿಟನ್ ನ ಮುಂದಿನ ಪ್ರಧಾನಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಪ್ರಧಾನಿಯಾಗಿರುವ ಬೋರಿಸ್ ಜಾನ್ಸನ್ ಅವರಿಗೆ ಆರು ಮಕ್ಕಳಿದ್ದು, ಪತ್ನಿ ಮರಿನಾ ರಿಂದ ವಿಚ್ಛೇದನ ಪಡೆದುಕೊಂಡಿದ್ದಾರೆ. ಹೀಗಾಗಿ ಬೋರಿಸ್ ಜಾನ್ಸನ್ ದೊಡ್ಡ ಮೊತ್ತದ ಪರಿಹಾರವನ್ನು ಮಾಜಿ ಪತ್ನಿಗೆ ನೀಡಬೇಕಿದೆ ಎಂದು ಹೇಳಲಾಗಿದೆ.