
ಮೂಲತಃ ಪಂಜಾಬ್ನವರಾದ ಲಿಲ್ಲಿ ಸಿಂಗ್ ಪೋಷಕರು ಕೆನಡಾದಲ್ಲಿ ವಾಸ ಮಾಡುತ್ತಿದ್ದರಿಂದ ಅವರೂ ಕೂಡ ಕೆನಡಿಗರಾಗಿದ್ದಾರೆ. ಭಾರತದಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆ ಬಗ್ಗೆ ಇಡೀ ವಿಶ್ವಕ್ಕೆ ಮನವರಿಕೆ ಮಾಡಿಕೊಡುವ ಸಲುವಾಗಿ ರೈತರ ಪರ ಮಾತನಾಡಿರುವ ವಿಡಿಯೋವನ್ನ ಟಿಕ್ಟಾಕ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಟಿಕ್ಟಾಕ್ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಇತ್ತ ಟ್ವಿಟರ್ನಲ್ಲೂ ರೈತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡುತ್ತಿರುವ ಫೋಟೋ ಶೇರ್ ಮಾಡಿ ಶಾಂತಿಯುತವಾಗಿ ಪ್ರತಿಭಟನೆ ಮಾಡುವ ಹಕ್ಕು ಎಲ್ಲರಿಗಿದೆ. ಅದನ್ನ ಕಸಿದುಕೊಳ್ಳುವ ಹಕ್ಕು ಯಾರಿಗೂ ಇಲ್ಲ ಅಂತಾ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ ಪಂಜಾಬ್ನಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳ ಬಗ್ಗೆಯೂ ಧ್ವನಿ ಎತ್ತಿದ್ದಾರೆ.