
ಬೀಜಿಂಗ್: ಚೀನಾ ಕೊರೊನಾ ಸೋಂಕು ಮುಕ್ತವಾಗಿದೆ ಎಂದು ಹೇಳಿದ ಬೆನ್ನಲ್ಲೇ ಒಂದೇ ದಿನ 57 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಕಳೆದ ಏಪ್ರಿಲ್ ನಿಂದ ಇದೇ ಮೊದಲ ಬಾರಿಗೆ ಚೀನಾದಲ್ಲಿ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಮತ್ತೊಮ್ಮೆ ವ್ಯಾಪಕವಾಗಿ ಹರಡುವ ಆತಂಕ ಎದುರಾಗಿದೆ. ಬೀಜಿಂಗ್ ಮಾಂಸ ಮತ್ತು ತರಕಾರಿ ಮಾರುಕಟ್ಟೆ ಪ್ರದೇಶದ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ಹರಡಿದೆ.
ದಕ್ಷಿಣ ಬೀಜಿಂಗ್ ನಲ್ಲಿ ತರಕಾರಿ, ಮಾಂಸ ಮಾರುಕಟ್ಟೆಯಲ್ಲಿ ಕೆಲಸ ಮಾಡುವ ವ್ಯಕ್ತಿಯೊಬ್ಬನಿಗೆ ಕೊರೊನಾ ಸೋಂಕು ತಗಲಿದ್ದು ಈತನಿಂದ 37 ಮಂದಿಗೆ ಸೋಂಕು ಹರಡಿದೆ. ಶನಿವಾರ ಒಂದೇ ದಿನ 57 ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು ಆತಂಕ ಹೆಚ್ಚಾಗಿದೆ. ಏಪ್ರಿಲ್ ನಿಂದ ಇದುವರೆಗೆ ಒಂದೇ ದಿನ ದಾಖಲಾದ ಅತಿ ಹೆಚ್ಚು ಪ್ರಕರಣ ಇದಾಗಿದೆ. ದಕ್ಷಿಣ ಚೀನಾ ಭಾಗದ ಅನೇಕ ಪ್ರದೇಶಗಳನ್ನು ಬಂದ್ ಮಾಡಲಾಗಿದೆ.