ಕಳೆದ ವರ್ಷ ಭಾರತದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರನ್ನು ಬಿಡುಗಡೆ ಮಾಡಿದ ಸಂದರ್ಭದಲ್ಲಿ ಶಾಂತಿಯ ಸಂದೇಶ ಸಾರಲು ಬಿಡುಗಡೆ ಮಾಡಲಾಗಿದೆ ಎಂದು ಹೇಳಿಕೊಂಡಿದ್ದ ಪಾಕಿಸ್ತಾನದ ನಿಜ ಬಣ್ಣ ಬಯಲಾಗಿದೆ.
ಭಾರತದ ಮಾತಿಗೆ ಬೆಚ್ಚಿ ಬಿದ್ದಿದ್ದ ಪಾಕಿಸ್ತಾನ ಅಭಿನಂದನ್ ವರ್ಧಮಾನ್ ಅವರನ್ನು ಬಿಡುಗಡೆ ಮಾಡಿತ್ತು. ಅಭಿನಂದನ್ ಅವರನ್ನು ಬಿಡುಗಡೆ ಮಾಡದಿದ್ದರೆ ಭಾರತದಿಂದ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಪಾಕಿಸ್ತಾನ ಬೆದರಿ ಕುಳಿತಿತ್ತು.
ಪಾಕ್ ಸೇನಾ ಮುಖ್ಯಸ್ಥ ಖಮರ್ ಬಜ್ವಾ ಕಾಲುಗಳು ನಡುಗುತ್ತಿದ್ದವು ಎಂದು ಹೇಳಲಾಗಿದೆ. ಪಾಕಿಸ್ತಾನ ಮುಸ್ಲಿಂ ಲೀಗ್ ನಾಯಕ ಅಯಾಜ್ ಸಾಧಿಕ್, 2019 ರಲ್ಲಿ ನಡೆದ ಸರ್ವಪಕ್ಷ ಸಭೆ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಅಂದಿನ ಸಭೆಯಲ್ಲಿ ಭಾರತದ ದಾಳಿಯ ಬಗ್ಗೆ ಪಾಕ್ ವಿದೇಶಾಂಗ ಸಚಿವ ಶಾ ಮಹಮ್ಮದ್ ಖುರೇಶಿ ಕೂಡ ಆತಂಕ ವ್ಯಕ್ತಪಡಿಸಿದ್ದರು. ಪಾಕ್ ಸೇನಾ ಮುಖ್ಯಸ್ಥ ಖಮರ್ ಬಜ್ವಾ ಕಾಲುಗಳು ನಡುಗುತ್ತಿದ್ದವು. ರಾತ್ರಿ 9ಗಂಟೆಯೊಳಗೆ ಬಿಡುಗಡೆ ಮಾಡದಿದ್ದರೆ ಭಾರತ ದಾಳಿ ನಡೆಸುವ ಆತಂಕ ವ್ಯಕ್ತವಾಗಿತ್ತು ಎಂದು ಹೇಳಿದ್ದಾರೆ.
ಭಾರತದ ದಾಳಿಯ ಭಯದಲ್ಲಿದ್ದ ಪಾಕಿಸ್ತಾನ ಅಭಿನಂದನ್ ವರ್ಧಮಾನ್ ಅವರನ್ನು ಬಿಡುಗಡೆ ಮಾಡಿದೆ ಎಂದು ಹೇಳಲಾಗಿದೆ.