ದಿನ ದಿನಕ್ಕೂ ಕೊರೊನಾ ರೋಗಿಗಳ ಸಂಖ್ಯೆ ಹೆಚ್ಚಾಗ್ತಿದೆ. ಚಳಿಗಾಲಕ್ಕೂ ಮುನ್ನ ಡಬ್ಲ್ಯುಎಚ್ ಒ ಎಚ್ಚರಿಕೆಯೊಂದನ್ನು ನೀಡಿದೆ. ಚಳಿಗಾಲದಲ್ಲಿ ಕೊರೊನಾ ಸೋಂಕಿತರು ಹಾಗೂ ಸಾವಿನ ಸಂಖ್ಯೆ ಹೆಚ್ಚಾಗಲಿದೆ ಎಂದು ಡಬ್ಲ್ಯುಎಚ್ ಒ ಹೇಳಿದೆ.
ಚಳಿಗಾಲದಲ್ಲಿ ಯುರೋಪ್ ಸೇರಿದಂತೆ ವಿಶ್ವದ ಅನೇಕ ದೇಶಗಳಲ್ಲಿ ಕೊರೊನಾ ಸಂಖ್ಯೆ ಹೆಚ್ಚಾಗಲಿದೆಯಂತೆ. ಇದಕ್ಕೆ ಈಗಿನಿಂದಲೇ ತಯಾರಿ ನಡೆಸಿ ಎಂದು ಡಬ್ಲ್ಯುಎಚ್ ಒ ಹೇಳಿದೆ. ಚಳಿಗಾಲದಲ್ಲಿ ಸೋಂಕು ವೇಗವಾಗಿ ಹರಡುವ ಅಪಾಯವಿದೆ. ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗಲಿದೆ. ಸಾವಿನ ಸಂಖ್ಯೆಯಲ್ಲೂ ಏರಿಕೆ ಕಂಡು ಬರಲಿದೆ ಎಂದು ಡಬ್ಲ್ಯುಎಚ್ ಒ ಹೇಳಿದೆ.
ಯುರೋಪ್ ನ 55 ರಾಜ್ಯಗಳು ಮತ್ತು 32 ಪ್ರಾಂತ್ಯಗಳಲ್ಲಿ 14 ದಿನಗಳಿಂದ ಕೊರೊನಾ ರೋಗಿಗಳ ಸಂಖ್ಯೆ ಶೇಕಡಾ 10 ಕ್ಕಿಂತ ಹೆಚ್ಚಾಗಿದೆ ಎಂದು ಡಬ್ಲ್ಯುಎಚ್ ಒ ಹೇಳಿದೆ.