alex Certify ವಿಶ್ವದಲ್ಲೇ ಅತಿ ಹೆಚ್ಚು ಕೊರೋನಾ ಸೋಂಕಿತರಿರುವ ಅಮೆರಿಕದಲ್ಲಿ ಮತ್ತೊಂದು ಆಘಾತಕಾರಿ ಬೆಳವಣಿಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶ್ವದಲ್ಲೇ ಅತಿ ಹೆಚ್ಚು ಕೊರೋನಾ ಸೋಂಕಿತರಿರುವ ಅಮೆರಿಕದಲ್ಲಿ ಮತ್ತೊಂದು ಆಘಾತಕಾರಿ ಬೆಳವಣಿಗೆ

ನ್ಯೂಯಾರ್ಕ್: ವಿಶ್ವದಲ್ಲಿಯೇ ಅತಿ ಹೆಚ್ಚು ಕೊರೋನಾ ಸೋಂಕಿತರು ಇರುವ ಅಮೆರಿಕದಲ್ಲಿ ಸಾಕುಪ್ರಾಣಿಗಳಲ್ಲಿಯೂ ಕೊರೋನಾ ಸೋಂಕು ಕಾಣಿಸಿಕೊಂಡಿದೆ.

ಅಮೆರಿಕದಲ್ಲಿ ಎರಡು ಸಾಕು ಬೆಕ್ಕುಗಳಿಗೆ ಕೊರೋನಾ ಸಂಕು ತಗುಲಿದೆ. ನ್ಯೂಯಾರ್ಕ್ ನಲ್ಲಿ ಎರಡು ಬೆಕ್ಕುಗಳಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಈ ಬೆಕ್ಕುಗಳಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಹಾಗಾಗಿ ಕೊರೋನಾ ಶಂಕೆಯಿಂದ ಈ ಬೆಕ್ಕುಗಳನ್ನು ಪರೀಕ್ಷೆಗೆ ಒಳಪಡಿಸಿದಾಗ ಕೊರೋನಾ ಪಾಸಿಟಿವ್ ವರದಿ ಬಂದಿದೆ.

ಸೋಂಕು ತಗುಲಿದ ವ್ಯಕ್ತಿಗಳೊಂದಿಗಿನ ಸಂಪರ್ಕದಿಂದ ಈ ಬೆಕ್ಕುಗಳಿಗೆ ಸೋಂಕು ತಗುಲಿದೆ ಎಂದು ಹೇಳಲಾಗಿದೆ. ಹಿಂದೆ ಮೃಗಾಲಯವೊಂದರ ಹುಲಿಗೆ ಕೊರೋನಾ ಸೋಂಕು ತಗುಲಿತ್ತು. ಇದರಿಂದಾಗಿ ಎಲ್ಲಾ ಮೃಗಾಲಯಗಳಲ್ಲಿ ಕಟ್ಟೆಚ್ಚರ ವಹಿಸಲಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...