alex Certify BIG NEWS: ಅಮೆರಿಕಾದಲ್ಲಿ ಒಂದು ವರ್ಷ ಶಾಲಾ-ಕಾಲೇಜ್ ‘ಬಂದ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಮೆರಿಕಾದಲ್ಲಿ ಒಂದು ವರ್ಷ ಶಾಲಾ-ಕಾಲೇಜ್ ‘ಬಂದ್’

ಅಮೆರಿಕಾದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ವಿಶ್ವದಲ್ಲಿಯೇ ನಂಬರ್ ಒನ್ ಸ್ಥಾನಕ್ಕೆ ತಂದು ನಿಲ್ಲಿಸಿದೆ. ಕೊರೊನಾ ಅಬ್ಬರದ ಹಿನ್ನಲೆಯಲ್ಲಿ ಒಂದು ವರ್ಷಗಳ ಕಾಲ ಶಾಲಾ-ಕಾಲೇಜು ಬಂದ್ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ.

ವಾಷಿಂಗ್ಟನ್ ಡಿಸಿ ಸೇರಿದಂತೆ ದೇಶದ ಕನಿಷ್ಠ 37 ರಾಜ್ಯಗಳಲ್ಲಿ ಈ ನಿರ್ಧಾರವನ್ನು ಜಾರಿಗೆ ತರಲಾಗಿದೆ. ಸೋಂಕು ತಡೆಗೆ ಅಮೆರಿಕಾ ಈ ಮಹತ್ವದ ನಿರ್ಧಾರ ಕೈಗೊಂಡಿದೆ.

ಕೆಲ ಪ್ರದೇಶಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಶಾಲೆ ತೆರೆಯಲು ಅವಕಾಶ ನೀಡುವ ಸಾಧ್ಯತೆಯಿದೆ. ಫ್ಲೋರಿಡಾ, ಟೆಕ್ಸಾಸ್ ಮತ್ತು ವಾಷಿಂಗ್ಟನ್, ಹಾಗೂ ವಾಷಿಂಗ್ಟನ್ ಡಿಸಿ ಸೇರಿದಂತೆ ಹಲವಾರು ರಾಜ್ಯಗಳು ವಿದ್ಯಾರ್ಥಿಗಳು ಮನೆಯಲ್ಲಿಯೇ ಅಧ್ಯಯನ ಮಾಡಬೇಕೆಂದು ಆದೇಶ ಹೊರಡಿಸಿವೆ. ಇದು ಕೆಲವರ ಮೆಚ್ಚುಗೆಗೆ ಕಾರಣವಾಗಿದೆ.

ಅಮೆರಿಕಾದ ಈ ನಿರ್ಧಾರ 3 ಕೋಟಿಗೂ ಹೆಚ್ಚು ಮಕ್ಕಳ ಮೇಲೆ ಪರಿಣಾಮ ಬೀರಲಿದೆ. ಭಾರತವೂ ಈ ನಿರ್ಧಾರ ತೆಗೆದುಕೊಳ್ಳಲಿದೆಯಾ ಎಂಬ ಪ್ರಶ್ನೆ ಈಗ ಮನೆ ಮಾಡಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...