alex Certify ಲಾಕ್ ಡೌನ್ ತೆಗೆಯುವ ಸಮಯ ಇದಲ್ಲ, ಜೂನ್ 1 ರ ವರೆಗೆ ವಿಸ್ತರಣೆ – ನಂತರ ಶಾಲೆ ಆರಂಭ: ಪ್ರಧಾನಿ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಕ್ ಡೌನ್ ತೆಗೆಯುವ ಸಮಯ ಇದಲ್ಲ, ಜೂನ್ 1 ರ ವರೆಗೆ ವಿಸ್ತರಣೆ – ನಂತರ ಶಾಲೆ ಆರಂಭ: ಪ್ರಧಾನಿ ಘೋಷಣೆ

ಇಂಗ್ಲೆಂಡ್ ನಲ್ಲಿ ಜೂನ್ 1ರ ವರೆಗೆ ಲಾಕ್ ಡೌನ್ ಮುಂದುವರಿಕೆ ಮಾಡಲಾಗುವುದು ಎಂದು ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ಘೋಷಣೆ ಮಾಡಿದ್ದಾರೆ.

ಕೊರೋನಾ ಸೋಂಕು ತಡೆಗೆ ಲಾಕ್ಡೌನ್ ಜಾರಿ ಮಾಡಲಾಗಿದೆ. ಲಾಕ್ ಡೌನ್ ನಡುವೆಯೂ ಕೊರೋನಾ ಸೋಮಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಮುಂದುವರೆಸಲು ತೀರ್ಮಾನಿಸಲಾಗಿದೆ. ಜೂನ್ 1 ರವರೆಗೆ ಲಾಕ್ ಡೌನ್ ದೊರೆಯಲಿದೆ. ಅಗತ್ಯ ವಸ್ತು ಮತ್ತು ಸೇವೆ ಹೊರತುಪಡಿಸಿ ಕಠಿಣ ನಿರ್ಬಂಧಗಳು ಜಾರಿಯಲ್ಲಿರುತ್ತದೆ ಎಂದು ಹೇಳಿದ್ದಾರೆ.

ಜೂನ್ 1 ರಿಂದ ಶಾಲೆ, ಅಂಗಡಿಗಳು ಆರಂಭವಾಗಲಿದೆ. ಸೋಂಕಿನ ಪ್ರಮಾಣ ಕಡಿಮೆಯಾದರೆ ಲಾಕ್ಡೌನ್ ಹಂತಹಂತವಾಗಿ ಸಡಿಲಗೊಳಿಸಲಾಗುವುದು. ಸೋಂಕು ತಡೆಗಟ್ಟಲು ಜನರ ಸಹಕಾರ ಅಗತ್ಯ ಎಂದು ದೂರದರ್ಶನದಲ್ಲಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ ಬೋರಿಸ್ ಜಾನ್ಸನ್ ಹೇಳಿದ್ದಾರೆ.

ಲಾಕ್ ಡೌನ್ ಜಾರಿಯಾದ 7 ವಾರಗಳ ನಂತರ ಬ್ರಿಟನ್ ನಲ್ಲಿ ಸುಮಾರು 31,800 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಸ್ವತಃ ಪ್ರಧಾನಿಯವರೇ ಕೊರೋನಾ ಸೋಂಕಿತರಾಗಿ ಚಿಕಿತ್ಸೆ ಬಳಿಕ ಗುಣಮುಖರಾಗಿದ್ದಾರೆ. ಲಾಕ್ ಡೌನ್ ಸಡಿಲಗೊಳಿಸುವ ಸಮಯ ಇದಲ್ಲ. ಷರತ್ತುಗಳೊಂದಿಗೆ ಹಂತಹಂತವಾಗಿ ಸಡಿಲ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...