ರಷ್ಯಾ ತನ್ನ ನಾಗರಿಕರಿಗಾಗಿ ಕೋವಿಡ್ -19 ಲಸಿಕೆ ಸ್ಪುಟ್ನಿಕ್ ವಿ ಯ ಮೊದಲ ಬ್ಯಾಚ್ ಬಿಡುಗಡೆ ಮಾಡಿದೆ.
ಶೀಘ್ರದಲ್ಲೇ ಪ್ರಾದೇಶಿಕ ವಿತರಣೆಯ ಯೋಜನೆಗಳಿವೆ ಎಂದು ರಷ್ಯಾದ ಆರೋಗ್ಯ ಸಚಿವಾಲಯ ತಿಳಿಸಿದೆ. ಈ ಲಸಿಕೆಯನ್ನು ಗಮಲಯ ರಾಷ್ಟ್ರೀಯ ಸಂಶೋಧನಾ ಕೇಂದ್ರ ಮತ್ತು ಸಾಂಕ್ರಾಮಿಕ ರೋಗಶಾಸ್ತ್ರ ಮತ್ತು ಸೂಕ್ಷ್ಮ ಜೀವವಿಜ್ಞಾನ ಮತ್ತು ರಷ್ಯಾದ ನೇರ ಹೂಡಿಕೆ ನಿಧಿ ಅಭಿವೃದ್ಧಿಪಡಿಸಿದೆ.
ಪ್ರಯೋಗಾಲಯಗಳಲ್ಲಿ ಗುಣಮಟ್ಟದ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ನಂತರ ಸ್ಪುಟ್ನಿಕ್ ವಿ ಅನ್ನು ನಾಗರಿಕ ಪ್ರಸರಣಕ್ಕಾಗಿ ಬಿಡುಗಡೆ ಮಾಡಲಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಆಗಸ್ಟ್ 11 ರಂದು ರಷ್ಯಾದ ಆರೋಗ್ಯ ಸಚಿವಾಲಯವು ಕೋವಿಡ್ -19 ರ ಸ್ಪುಟ್ನಿಕ್ ವಿ ಲಸಿಕೆಯನ್ನು ನೋಂದಾಯಿಸಿತ್ತು. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇದನ್ನು ಘೋಷಿಸಿದ್ದರು. ತಮ್ಮ ದೇಶವು ಕೊರೊನಾ ವೈರಸ್‌ನ ಮೊದಲ ಲಸಿಕೆಯನ್ನು ತಯಾರಿಸಿದೆ ಎಂದು ಹೇಳಿದ್ದರು. ಇದು ಎಲ್ಲರನ್ನು ಅಚ್ಚರಿಗೊಳಿಸಿತ್ತು.
ರಷ್ಯಾದ ರಾಜಧಾನಿಯ ಹೆಚ್ಚಿನ ನಿವಾಸಿಗಳಿಗೆ ಕೆಲವೇ ತಿಂಗಳುಗಳಲ್ಲಿ ಕೊರೊನಾ ವೈರಸ್‌ಗೆ ಲಸಿಕೆ ನೀಡಲಾಗುವುದು ಎಂದು ಮಾಸ್ಕೋ ಮೇಯರ್ ಸೆರ್ಗೆಯ್ ಸೋಬಯಾನಿನ್ ಭಾನುವಾರ ಹೇಳಿದ್ದರು. ಆರೋಗ್ಯ ಸಚಿವಾಲಯದ ಪ್ರಕಾರ, ದೇಶದ ಇತರ ಭಾಗಗಳಲ್ಲಿ ಶೀಘ್ರದಲ್ಲೇ ಮೊದಲ ಬ್ಯಾಚ್ ಲಸಿಕೆ ಪೂರೈಸುವ ಯೋಜನೆ ಇದೆ.