ಕೋವಿಡ್ -19 ರೋಗಿಗಳ ಸಂಖ್ಯೆ ಅಮೆರಿಕಾದಲ್ಲೂ ಹೆಚ್ಚಾಗಿದೆ. ಸೋಂಕು ನಿಯಂತ್ರಣಕ್ಕೆ ಸಾಕಷ್ಟು ಪ್ರಯತ್ನಗಳು ನಡೆಯುತ್ತಿವೆ. ಈ ಮಧ್ಯೆ ಕೊರೊನಾ ರೋಗಿಗಳ ಚಿಕಿತ್ಸೆಗೆ ಪ್ಲಾಸ್ಮಾ ಥೆರಪಿಗೆ ಒಪ್ಪಿಗೆ ನೀಡಿದೆ.
ಯುಎಸ್ ಅಧಿಕಾರಿಗಳು ಭಾನುವಾರ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ. ಕೊರೊನಾದಿಂದ ಅಮೆರಿಕದಲ್ಲಿ ಈವರೆಗೆ 1 ಲಕ್ಷ 76,000 ಜನರು ಸಾವನ್ನಪ್ಪಿದ್ದಾರೆ. ಯುಎಸ್ ಆಹಾರ ಮತ್ತು ಔಷಧ ಮಂಡಳಿ ಪ್ಲಾಸ್ಮಾ ಚಿಕಿತ್ಸೆಗೆ ಅನುಮತಿಸಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದಕ್ಕೆ ಒಪ್ಪಿಗೆ ನೀಡಿದ್ದಾರೆ.
ಸೋಂಕು ನಿಗ್ರಹಿಸಲು ಪ್ಲಾಸ್ಮಾ ಚಿಕಿತ್ಸೆಗೆ ಒಪ್ಪಿಗೆ ನೀಡುವಂತೆ ತೀವ್ರ ಒತ್ತಡ ಕೇಳಿ ಬಂದಿತ್ತು. ಕೊರೊನಾ ವಿಶ್ವದ ಅತಿದೊಡ್ಡ ಆರ್ಥಿಕತೆಯ ಮೇಲೆ ಹೊಡೆತ ನೀಡಿದೆ. ನವೆಂಬರ್ ಚುನಾವಣೆಯಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆಲುವು ಕಷ್ಟಸಾಧ್ಯ ಎನ್ನಲಾಗ್ತಿದೆ.