
ವೈಟ್ ಹೌಸ್ ನಿಂದ ಹೆಲಿಕಾಪ್ಟರ್ ಮೂಲಕ ಡೊನಾಲ್ಡ್ ಟ್ರಂಪ್ ವಾಲ್ಟರ್ ರೀಡ್ ಆಸ್ಪತ್ರೆಗೆ ತೆರಳಿದ್ದು, ಅವರು ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಆಸ್ಪತ್ರೆಗೆ ತೆರಳುವ ಮುನ್ನ ವಿಡಿಯೋದಲ್ಲಿ ಮಾತನಾಡಿದ್ದ ಡೊನಾಲ್ಡ್ ಟ್ರಂಪ್ ತಾವು ಆಸ್ಪತ್ರೆಗೆ ದಾಖಲಾಗುತ್ತಿರುವುದಾಗಿ ತಿಳಿಸಿದ್ದರು. ಅಲ್ಲದೆ ಕೊರೊನಾ ದೃಢಪಟ್ಟಿರುವ ಪತ್ನಿ ಮೆಲಾನಿಯಾ ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.