ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುದ್ದಿಗೋಷ್ಠಿ ನಡೆಸುವ ವೇಳೆ ಶೂಟೌಟ್ ಆಗಿದೆ. ಅಮೆರಿಕ ಅಧ್ಯಕ್ಷರ ನಿವಾಸ ವೈಟ್ ಹೌಸ್ ಬಳಿಯಲ್ಲೇ ಗುಂಡಿನ ದಾಳಿ ನಡೆದಿದ್ದು ಭಾರೀ ಭದ್ರತಾ ಲೋಪವಾಗಿದೆ ಎಂದು ಹೇಳಲಾಗಿದೆ.
ಶ್ವೇತಭವನದ ಹೊರಗೆ ಶೂಟೌಟ್ ನಡೆದಿದ್ದು, ಕೂಡಲೇ ಭದ್ರತಾ ಸಿಬ್ಬಂದಿ ಧಾವಿಸಿ ಮುನ್ನೆಚ್ಚರಿಕೆ ಕೈಗೊಂಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಟ್ರಂಪ್, ಶೂಟೌಟ್ ನಂತರ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಭದ್ರತಾ ಸಿಬ್ಬಂದಿ ತ್ವರಿತ ಮತ್ತು ಪರಿಣಾಮಕಾರಿ ಕೆಲಸವನ್ನು ಮಾಡಿದ್ದಕ್ಕಾಗಿ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದು ತಿಳಿಸಿದ್ದು ಘಟನೆಗೆ ಸಂಬಂಧಿಸಿದಂತೆ ಭದ್ರತಾ ಸಿಬ್ಬಂದಿ ಕ್ರಮಕೈಗೊಂಡಿರುವುದಾಗಿ ಹೇಳಿದ್ದಾರೆ.