ಪಾಕಿಸ್ತಾನದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಅವರಿಗೂ ಕೊರೋನಾ ಪಾಸಿಟಿವ್ ವರದಿ ಬಂದಿದೆ.
ಪಾಕಿಸ್ತಾನದ ಮಾಜಿ ಪ್ರಧಾನಿ ಯೂಸುಫ್ ರಾಜಾ ಗಿಲಾನಿ ಅವರಿಗೂ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಯೂಸುಫ್ ರಾಜಾ ಗಿಲಾನಿ ಅವರ ಪುತ್ರ ಕಾಶಿಮ್ ಜಿಲಾನಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದು, ಇಮ್ರಾನ್ ಖಾನ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ನಮ್ಮ ತಂದೆಯವರಿಗೆ ಕೊರೊನಾ ಸೋಂಕು ಬರಲು ನಿಮ್ಮ ಸರ್ಕಾರವೇ ಕಾರಣ ಎಂದು ದೂರಿದ್ದು, ತಂದೆಯ ಜೀವ ಅಪಾಯದಲ್ಲಿ ಸಿಲುಕಿದೆ ಎಂದು ತಿಳಿಸಿದ್ದಾರೆ.
ಪ್ರಧಾನಿ ಇಮ್ರಾನ್ ಖಾನ್ ಮತ್ತು ಅವರ ಸರ್ಕಾರದ ಆಡಳಿತ ಹೊಣೆಗಾರಿಕೆಗೆ ಧನ್ಯವಾದಗಳು. ತಂದೆಯ ಜೀವವನ್ನು ಯಶಸ್ವಿಯಾಗಿ ಅಪಾಯಕ್ಕೆ ಸಿಲುಕಿಸಿದ್ದೀರಿ. ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ ಎಂದು ಹೇಳಿದ್ದಾರೆ.
ಕಳೆದ ವಾರ ರಾವಲ್ಪಿಂಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಯೂಸುಫ್ ರಾಜಾ ಗಿಲಾನಿ ಭಾಗಿಯಾಗಿದ್ದು, ಈ ವೇಳೆ ಸೋಂಕು ತಗುಲಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.