ಜಿನೇವಾ: ಕೋವಿಡ್ ಲಸಿಕೆ ಪಡೆಯಲು ಯುವಕರು 2022ರ ವರೆಗೆ ಕಾಯಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.
ಫ್ರಾನ್ಸ್, ರಷ್ಯಾ, ಅಮೆರಿಕ, ಇಂಗ್ಲೆಂಡ್, ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಕೊರೋನಾ ತಡೆ ಲಸಿಕೆ ಅಭಿವೃದ್ಧಿಪಡಿಸಲಾಗುತ್ತಿದೆ. ರಷ್ಯಾ ಈಗಾಗಲೇ ಸ್ಪುಟ್ನಿಕ್ ಹೆಸರಲ್ಲಿ ಕೊರೋನಾ ಲಸಿಕೆ ಬಿಡುಗಡೆ ಮಾಡಿದೆ. ಆದರೆ, ಮುಂದಿನ ವರ್ಷದ ವೇಳೆಗೆ ಲಸಿಕೆ ಮಾರುಕಟ್ಟೆಗೆ ಬರುವ ಸಾಧ್ಯತೆ ಇದೆ.
ಲಸಿಕೆ ಬಿಡುಗಡೆಯಾಗುತ್ತಿದ್ದಂತೆ ಮಾರ್ಗಸೂಚಿ ಬಿಡುಗಡೆ ಮಾಡಲಿದ್ದು, ಯುವಕರು ಲಸಿಕೆ ಪಡೆಯಲು 2022 ರ ವರೆಗೆ ಕಾಯುವುದು ಅನಿವಾರ್ಯ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ ಡಾ. ಸೌಮ್ಯಾ ಸ್ವಾಮಿನಾಥನ್ ಹೇಳಿದ್ದಾರೆ.
ಲಸಿಕೆ ಬಿಡುಗಡೆಯಾದ ನಂತರದಲ್ಲಿ ಆರೋಗ್ಯ ಸಿಬ್ಬಂದಿ, ಕೊರೋನಾ ವಾರಿಯರ್ಸ್, ವೃದ್ಧರು ಮತ್ತು ಹೆಚ್ಚಿನ ಅಪಾಯವಿರುವ ವ್ಯಕ್ತಿಗಳಿಗೆ ನೀಡಲಾಗುತ್ತದೆ. ಆರೋಗ್ಯವಂತ ಯುವಕರು ಲಸಿಕೆ ಪಡೆಯಲು 2022 ರವರೆಗೆ ಕಾಯಬೇಕಿದೆ ಎಂದು ಅವರು ಹೇಳಿದ್ದಾರೆ.
ಈ ವರ್ಷಾಂತ್ಯಕ್ಕೆ ಇಲ್ಲವೇ ಮುಂದಿನ ವರ್ಷದ ಆರಂಭದ ವೇಳೆಗೆ ಪ್ರಯೋಗ ಯಶಸ್ವಿಯಾದ ಕೊರೋನಾ ಲಸಿಕೆ ಸಿಗಬಹುದೆಂದು ಹೇಳಲಾಗಿದೆ.